Ad Widget .

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕಾರ್ಯ ನಿರ್ವಹಿಸುವ ವಿದ್ಯಾರ್ಥ್ ಎಂಬವರ ಪತ್ನಿ ಶಮಿತಾ (24) ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ.

Ad Widget . Ad Widget . Ad Widget .

ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಲಾಗಿದೆ.

ಪರಸ್ಪರ ಪ್ರೀತಿಸುತ್ತಿದ್ದ ಶಮಿತಾ ಮತ್ತು ವಿದ್ಯಾರ್ಥ್ 2023ರ ಮಾರ್ಚ್ ನಲ್ಲಿ ವಿವಾಹವಾಗಿದ್ದರು. ಶಮಿತಾ ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದವರು.

Leave a Comment

Your email address will not be published. Required fields are marked *