Ad Widget .

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ರಾಜ್ಯದ ಶಾಲೆಗಳಿಗೆ ರಜೆಯಿಲ್ಲ| ನೇರಪ್ರಸಾರಕ್ಕೆ ಖಾಸಗಿ‌ ಶಾಲೆಗಳ ಒಕ್ಕೂಟ ನಿರ್ಧಾರ

ಸಮಗ್ರ ನ್ಯೂಸ್: ರಾಮಮಂದಿರ ‘ಪ್ರಾಣ ಪ್ರತಿಷ್ಠಾಪನೆ’ಯ ಹಿನ್ನೆಲೆಯಲ್ಲಿ ಜನವರಿ 22 ರಂದು ರಾಜ್ಯದಲ್ಲಿಯೂ ರಜೆ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಆದರೆ, ಅಂದು ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ನಡುವೆ, ಖಾಸಗಿ ಶಾಲಾ ಆಡಳಿತ ಮಂಡಳಿಗಳು ವಿದ್ಯಾರ್ಥಿಗಳಿಗೆ ಸಮಾರಂಭವನ್ನು ಲೈವ್-ಸ್ಟ್ರೀಮ್(ನೇರಪ್ರಸಾರ) ಮೂಲಕ ತೋರಿಸಲು ಯೋಜಿಸಿವೆ ಎಂದು ತಿಳಿದುಬಂದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಜನವರಿ 22ರಂದು ಶಾಲೆಗಳಿಗೆ ರಜೆ ಘೋಷಿಸುತ್ತಿಲ್ಲ. ಅದು ಕೆಲಸದ ದಿನವಾಗಿರುತ್ತದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಿಯಾದರು ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಪರಿಸ್ಥಿತಿ ಇದ್ದರೆ, ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸಲು ಅವಕಾಶ ಇರುತ್ತದೆ” ಎಂದು ಶಿಕ್ಷಣ ಇಲಾಖೆಯ ಅದಿಕಾರಿಯೊಬ್ಬರು ತಿಳಿಸಿದ್ದಾರೆ.

Ad Widget . Ad Widget . Ad Widget .

ರಜೆ ಇರುವುದಿಲ್ಲವೆಂದು ಸ್ಪಷ್ಟವಾದ ಬಳಿಕ, ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಸ್ಕೂಲ್ಸ್ ಇನ್ ಕರ್ನಾಟಕ (ಕೆಎಎಮ್‌ಎಸ್) ತನ್ನ ಎಲ್ಲ ಸದಸ್ಯ ಶಾಲೆಗಳಿಗೆ ರಜೆ ಘೋಷಿಸದಂತೆ ಸೂಚಿಸಿದೆ. ಅಲ್ಲದೆ, ಉದ್ಘಾಟನಾ ಸಮಾರಂಭವನ್ನು ಶಾಲೆಗಳಲ್ಲಿ ಲೈವ್-ಸ್ಟ್ರೀಮ್ ಮೂಲಕ ವಿದ್ಯಾರ್ಥಿಗಳಿಗೆ ತೋರಿಸುವಂತೆ ನಿರ್ದೇಶಿಸಿದೆ ಎಂದು ತಿಳಿದುಬಂದಿದೆ.

Bottom of Form ಕೆಎಎಂಎಸ್‌ನ ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ನಿರ್ದೇಶನ ಹೊರಡಿಸಿದ್ದು, “ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭವು ಇಡೀ ದೇಶದ ಗಮನ ಸೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಂಘದ ಎಲ್ಲ ಸದಸ್ಯರು ತಮ್ಮ ತಮ್ಮ ಶಾಲೆಗಳಲ್ಲಿ ಒಂದೂವರೆ ಗಂಟೆಗಳ ಕಾಲ ಕಾರ್ಯಕ್ರಮವನ್ನು ನೇರಪ್ರಸಾರ ಮಾಡಬೇಕು” ಎಂದು ಸೂಚಿಸಿದ್ದಾರೆ.”ಆಯಾ ಶಿಕ್ಷಣ ಸಂಸ್ಥೆಗಳು ಈ ಕಾರ್ಯಕ್ರಮವನ್ನು ರಾಜಕೀಯವನ್ನು ಹೊರಗಿಡುವ ರೀತಿಯಲ್ಲಿ ನಡೆಸಬೇಕು. ಐತಿಹಾಸಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂದರ್ಭದಲ್ಲಿ ರಾಮ ಜನ್ಮಭೂಮಿಯ ಮಹತ್ವವನ್ನು ತಿಳಿಸಬೇಕು. ರಜೆ ನೀಡುವುದು ಸರಿಯಾದ ಮಾರ್ಗವಲ್ಲ. ರಜೆ ನೀಡುವುದರಿಂದ ವಿದ್ಯಾರ್ಥಿಗಳು ಒಟ್ಟಿಗೆ ಐತಿಹಾಸಿಕ ಕ್ಷಣವನ್ನು ವೀಕ್ಷಿಸುವ ಅನುಭವವನ್ನು ಕಳೆದುಕೊಳ್ಳುತ್ತಾರೆ ಎಂಬುದು ನಮ್ಮ ಅಭಿಪ್ರಾಯವಾಗಿದೆ,” ಎಂದು ಅವರು ಹೇಳಿದ್ದಾರೆ. .

Leave a Comment

Your email address will not be published. Required fields are marked *