ಸಮಗ್ರ ನ್ಯೂಸ್: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು, ಇಬ್ಬರೂ ಕಾರ್ಮಿಕರು ದುರ್ಮರಣ ಹಾಗೂ 20 ಜನ ಗಾಯಗೊಂಡ ಘಟನೆ ನಡೆದಿದೆ. ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಸೆಂಟ್ ಆಗ್ನೇಸ್ ಎಂಬ ಶಾಲೆಯ ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.