ಸಮಗ್ರ ಉದ್ಯೋಗ: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.
ಹುದ್ದೆಯ ಮಾಹಿತಿ:
ಬಿಲಾಸ್ಪುರ್ -2
ರಾಯಗಢ- 1
ರಾಯಪುರ- 3
ಸರ್ಗುಜಾ-1
ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 20, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/ ಮಹಿಳಾ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ
ಎಲ್ಲಾ ಇತರೆ ಅಭ್ಯರ್ಥಿಗಳು: ರೂ.100/-
ಪಾವತಿ ವಿಧಾನ: ಇ-ಚಲನ್
ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಿಲಾಸ್ಪುರ್, ರಾಯಗಢ, ರಾಯಪುರ, ಸರ್ಗುಜಾದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಡ್ರೈವಿಂಗ್ ಲೈಸೆನ್ಸ್
ಥಿಯರಿ ಟೆಸ್ಟ್
ಪ್ರಾಕ್ಟಿಕಲ್ ಟೆಸ್ಟ್
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಅಸಿಸ್ಟೆಂಟ್ ಡೈರೆಕ್ಟರ್ (Staff)
O/o ಮುಖ್ಯ ಪೋಸ್ಟ್ಮಾಸ್ಟರ್ ಜನರಲ್
ಛತ್ತೀಸ್ಗಢ ವೃತ್ತ
ರಾಯಪುರ-492001