ಸಮಗ್ರ ಉದ್ಯೋಗ: ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮೈಸೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಗ್ರೂಪ್ ಡಿ, ಟೈಪಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಹುದ್ದೆಯ ಮಾಹಿತಿ:
ಟೈಪಿಸ್ಟ್-1
ಗ್ರೂಪ್ ಡಿ-1
ವಿದ್ಯಾರ್ಹತೆ:
ಟೈಪಿಸ್ಟ್- 12ನೇ ತರಗತಿ, ಡಿಪ್ಲೊಮಾ
ಗ್ರೂಪ್ ಡಿ- 10ನೇ ತರಗತಿ
ವಯೋಮಿತಿ:
ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಮೈಸೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 15, 2024ಕ್ಕೆ ಕನಿಷ್ಠ 18 ವರ್ಷಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.