Ad Widget .

ಕೊಡಗು: ಜ.26 ರಿಂದ 28ರವರೆಗೆ ಫಲಪುಷ್ಪ ಪ್ರದರ್ಶನ

ಸಮಗ್ರ ನ್ಯೂಸ್:ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜ. 26 ರಿಂದ 28ರವರೆಗೆ ನಗರದ ರಾಜಸೀಟ್ ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ‘ಫಲಪುಷ್ಪ ಪ್ರದರ್ಶನ’ ನಡೆಯಲಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಫಲಪುಷ್ಪ ಪ್ರದರ್ಶನದ ಉದ್ಘಾಟನೆಯು ಜ. 26ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ|| ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷ ಎನ್.ಪಿ.ಅನಿತಾ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ|| ಶಾಮ್ಲಾ ಇಕ್ಬಾಲ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ.ಎಸ್.ರಮೇಶ್, ಕೊಡಗು ಜಿಲ್ಲಾ ಹಾಪ್ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಮಾಚೇಟ್ಟಿರ ಚೋಟು ಕಾವೇರಪ್ಪ, ಬೆಂಗಳೂರು ಲಾಲ್ಬಾಗ್ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಕೆ.ಎಂ.ಪರಶಿವಮೂರ್ತಿ, ತೋಟಗಾರಿಕೆ ಅಪರ ನಿರ್ದೇಶಕರು(ತಾಳೆ ಬೆಳೆ) ಮತ್ತು (ಕ್ಷೇತ್ರ ಮತ್ತು ನರ್ಸರಿ) ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಅಪರ ನಿರ್ದೇಶಕ ಡಾ.ಪ್ರಕಾಶ್ ಎಂ.ಸೊಬರದ, ತೋಟಗಾರಿಕೆ ಅಪರ ನಿರ್ದೇಶಕರು(ಹಣ್ಣುಗಳು) ಡಾ.ಕೆ.ಬಿ.ದುಂಡಿ, ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಂ.ಜಗದೀಶ್, ಮೈಸೂರು ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕ ಡಾ.ಎಚ್.ಎಂ.ನಾಗರಾಜ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ತೋಟಗಾರಿಕೆ ಉಪನಿರ್ದೇಶಕ ಯೋಗೇಶ್ ಎಚ್.ಆರ್., ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎಸ್.ಮುತ್ತಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *