ಸಮಗ್ರ ನ್ಯೂಸ್: 75ನೇ ಗಣರಾಜ್ಯೋತ್ಸವದ ಹಿನ್ನೆಲೆ ಜನವರಿ 25 ಹಾಗೂ 26 ರಂದು ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ
ಸಂಬಂಧಿಸಿದ ಎಲ್ಲಾ ಸಂಸ್ಥೆಗಳು ಹಾಗೂ ದೇವಾಲಯಗಳಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರಕ್ಕೆ ವ್ಯವಸ್ಥೆ ಮಾಡಲು ಸುತ್ತೋಲೆ ಹೊರಡಿಸಲಾಗಿದೆ.
ಜನವರಿ 26 ರಂದು ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಗಳನ್ನು ಮಾಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ತಿಳಿಸಿದೆ.
ಕರ್ನಾಟಕ ಸರ್ಕಾರ ಪ್ರತಿ ವರ್ಷ ಗಣರಾಜ್ಯೋತ್ಸವ ವೇಳೆಗೆ ಅನುದಾನ ಬಿಡುಗಡೆ ಮಾಡುತ್ತದೆ. ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ 50 ಲಕ್ಷ ರೂ., ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ 1 ಲಕ್ಷ ರೂ. ಮತ್ತು ತಾಲೂಕು ಮಟ್ಟದ ಕಾರ್ಯಕ್ರಮಕ್ಕೆ ಪ್ರತಿ ತಾಲೂಕಿಗೆ 20,000 ರೂ.ಗಳ ಅನುದಾನ ಬಿಡುಗಡೆ ಮಾಡಲು ಆದೇಶಿಸಲಾಗಿದೆ.
ಕರ್ನಾಟಕದಲ್ಲಿ ಮುಜರಾಯಿ ಇಲಾಖೆಯ 34 ಸಾವಿರ ದೇವಾಲಯಗಳಿವೆ. ಖಾಸಗಿ ದೇವಾಲಯಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಈ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ.