ಸಮಗ್ರ ನ್ಯೂಸ್: ರಾಜ್ಯದ ಸರಕಾರಿ ನೌಕರರ ‘ಒಪಿಎಸ್’ ಬೇಡಿಕೆಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಡೇರಿಸುವ ಮೂಲಕ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ಸರಕಾರಿ ನೌಕರರು ಹಲವು ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಸಿದ್ದರಾಮಯ್ಯ ಸರ್ಕಾರ ಮಣಿದಿದೆ.
ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ.ಇದರ ಬೆನ್ನಲ್ಲೇ ಸರಕಾರಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಬಿದ್ದಿದೆ.
2006ರ ಏಪ್ರಿಲ್ಗೆ ಮುನ್ನ ನೇಮಕಗೊಂಡ ಸರ್ಕಾರಿ ನೌಕರರು OPS ವ್ಯಾಪ್ತಿಗೆ ಒಳಪಡಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದು ಎಲ್ಲಾ ಸರ್ಕಾರಿ ನೌಕರರಿಗೂ ಸಂಬಂಧಪಟ್ಟಿರುವುದಿಲ್ಲ. ಕೇವಲ ಏಪ್ರಿಲ್ 2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿದವರಿಗೆ ಮಾತ್ರ ಎಂದು ತಿಳಿಸಿದೆ.ಕರ್ನಾಟಕ ಸರಕಾರದ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಅವರು ಹಳೆ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದ್ದಾರೆ.