ಸಮಗ್ರನ್ಯೂಸ್: ಜ.26: ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಸುಳ್ಯ ತಾಲೂಕು ಆಶ್ರಯದಲ್ಲಿ ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಸುಳ್ಯ ತಹಶಿಲ್ದಾರ್ ಜಿ.ಮಂಜುನಾಥ್ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ವೃತ್ತ ನಿರೀಕ್ಷಕ ಮೋಹನ್ ಕೊಠಾರಿ, ಎಒಎಲ್ಇ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸುಳ್ಯ ನ.ಪಂ. ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್., ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ, ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ನ.ಪಂ. ಸದಸ್ಯರಾದ ವಿನಯ ಕುಮಾರ್ ಕಂದಡ್ಕ, ಎಂ.ವೆಂಕಪ್ಪ ಗೌಡ, ಡೇವಿಡ್ ಧೀರಾ ಕ್ರಾಸ್ತಾ, ಶಶಿಕಲಾ ನೀರಬಿದಿರೆ, ಶೀಲಾ ಅರುಣ್ ಕುರುಂಜಿ, ಕಿಶೋರಿ ಶೇಟ್, ಶಿಲ್ಪಾ ಸುದೇವ್, ಸುಶೀಲಾ, ಸರಕಾರಿ ನೌಕರರ ಸಂಘದ ಅಧ್ಯಕ್ಷ ತೀರ್ಥರಾಮ ಮತ್ತಿತರರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಈ.ರಮೇಶ ಸ್ವಾಗತಿಸಿದರು. ತಾ.ಪಂ. ಇಒ ರಾಜಣ್ಣ ವಂದಿಸಿದರು. ಚಂದ್ರಮತಿ ಕೆ. ಕಾರ್ಯಕ್ರಮ ನಿರೂಪಿಸಿದರು.
ಸುಳ್ಯ ಪೊಲೀಸ್ ಉಪನಿರೀಕ್ಷಕಿ ಸರಸ್ವತಿ ನೇತೃತ್ವದಲ್ಲಿ ಆಕರ್ಷಕ ಪಥಸಂಚಲ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.