ಸಮಗ್ರ ನ್ಯೂಸ್:ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಜ.26 ರಿಂದ ಜ.29 ರ ವರೆಗೆ ನಡೆಯಲಿದೆ.
ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಬಹಳ ಅದ್ದೂರಿಯಾಗಿ ನಡೆಯಲಿದೆ.
ಇಂದು ಬೆಳಗ್ಗೆ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗ ತಂಬಿಲ ಸೇವೆ ನಡೆಯಿತು, ಸಂಜೆ 5 ರಿಂದ ಬಾಳಿಲ ಶ್ರೀ ಮಂಜುನಾಥೇಶ್ವರ ದ್ವಾರದ ಬಳಿಯಿಂದ ಮೂರುಕಲ್ಲಡ್ಕ ಶ್ರೀ ಉಳ್ಳಾಕುಲು ಸ್ಥಾನದವರೆಗೆ ಹಸಿರುವಾಣಿ ಮೆರವಣಿಗೆ ನಡೆಯಲಿದೆ.
ಜ. 27 ರಂದು ಬೆ 8.30 ರಿಂದ ಗಣಪತಿ ಹವನ ಸಹಿತ ಚಂಡಿಕಾ ಹವನ ಮತ್ತು ದುರ್ಗಾಪೂಜೆ, ಶ್ರೀ ದೈವಗಳಿಗೆ ವಿಶೇಷ ತಂಬಿಲ ಸೇವೆ, ಸಾಮೂಹಿಕ ಪ್ರಾರ್ಥನೆ, ಪ್ರಸಾದ ವಿತರಣೆ ನಡೆದು, ಮದ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30 ರಿಂದ ಕುಕ್ಕುತ್ತಡಿಯ ಶ್ರೀದೈವಗಳ ಬಚ್ಚೆಲ್ ಕಟ್ಟೆಯಲ್ಲಿ ತಂಬಿಲ ಸೇವೆ ನಡೆದು ರಾತ್ರಿ ಗಂಟೆ 7.30 ಕ್ಕೆ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಕ್ಕೆ ಎಣ್ಣೆ ಬೂಳ್ಯ ನೀಡುವುದು.
ಜ .28 ರಂದು ಬೆಳಗ್ಗೆ 5.30 ರಿಂದ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಸಪರಿವಾರ ದೈವಗಳ ಹಾಗೂ ತೋಟದ ಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಡುವುದು, ಮುಂಜಾನೆ 7 ಗಂಟೆಗೆ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ,ಬಟ್ಟಲು ಕಾಣಿಕೆ, ಸಿರಿಮುಡಿ ಗಂಧ ಪ್ರಸಾದ ವಿತರಣೆ , ಕೊಡಮಣಿತ್ತಾಯ, ಕೊಲ್ಲಿಕುಮಾರ, ಪುರುಷ ದೈವ, ಮೈಸಂದಾಯ ದೈವಗಳ ಕಟ್ಟುಕಟ್ಟಳೆಯ ನೇಮ ನಡೆದು ಬೂಳ್ಯ ವಿತರಣೆ ಕಾರ್ಯಕ್ರಮ ನಡೆಯಲಿದೆ.
ನಂತರ ಬೆ 11.30 ರಿಂದ ರುದ್ರಚಾಮುಂಡಿ ದೈವದ ನರ್ತನ ಸೇವೆ ಹಾಗೂ ಬೂಳ್ಯ ವಿತರಣೆ, ಅನ್ನಸಂತರ್ಪಣೆ ನಡೆಯಲಿವೆ. ಸಂಜೆ 6 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮವಿದ್ದು ಇದರ ಅಧ್ಯಕ್ಷತೆಯನ್ನು ಚೆನ್ನಪ್ಪ ಗೌಡ ಕಜೆಮೂಲೆ ಅಧ್ಯಕ್ಷರು ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ , ಮುಖ್ಯ ಭಾಷಣಕಾರರು ಸದಾಶಿವ ಭಟ್ ಜೋಗಿಬೆಟ್ಟು ವಿಶ್ರಾಂತ ಅಧ್ಯಾಪಕರು, ಹಾಗೂ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ನಳಿನ್ ಕುಮಾರ್ ಕಟೀಲು ಸಂಸದರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ, ಭಾಗೀರಥಿ ಮುರುಳ್ಯ ಶಾಸಕರು ಸುಳ್ಯ ವಿಧಾನ ಸಭಾ ಕ್ಷೇತ್ರ, ಪಾವನ ಜೋಗಿಬೆಟ್ಟು ಅಧ್ಯಕ್ಷರು ಗ್ರಾಮ ಪಂಚಾಯತ್ ಬಾಳಿಲ, ಬಾಲಕೃಷ್ಣ ಬೇರಿಕೆ ಅಧ್ಯಕ್ಷರು ಗ್ರಾಮ ಪಂಚಾಯತ್ ಕಳಂಜ, ಕೂಸಪ್ಪ ಗೌಡ ಮುಗುಪ್ಪು ಅಧ್ಯಕ್ಷರು ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೋಟೆಮುಂಡುಗಾರು ಭಾಗವಹಿಸಲಿದ್ದಾರೆ. ನಂತರ 7 ಗಂಟೆ ಯಿಂದ ಪ್ರಸಿದ್ಧ ಕಲಾವಿದರಿಂದ ‘ಮರ್ಯಾದಾ ಪುರುಷೋತ್ತಮ’ ಯಕ್ಷಗಾನ ಬಯಲಾಟ ನಡೆಯಲಿದೆ. ರಾತ್ರಿ 9 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ.
ಜ.29 ರಂದು ಬೆ 7.30 ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, 8.30 ರಿಂದ ಕಳಂಜ ಗುತ್ತಿಗೆಯಿಂದ ಧೂಮಾವತಿ ಹಾಗೂ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವಗಳ ಭಂಡಾರ ಆಗಮಿಸಿ 10.30 ರಿಂದ ದೈವಗಳ ನರ್ತನ ಸೇವೆ ನಡೆಯಲಿದೆ, ಮದ್ಯಾಹ್ನ 1 ರಿಂದ ಅನ್ನಸಂತರ್ಪಣೆ ಮತ್ತು 2.30 ರಿಂದ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಳಿ ನೇಮೋತ್ಸವ ಹಾಗೂ ಬೂಳ್ಯ ವಿತರಣೆ ಕಾರ್ಯಕ್ರಮ ನಡೆಯಲಿದೆ.