ಮೈಸೂರು: ಕೊರೋನಾ ಕಾರಣದಿಂದ ಮುಂದೂಡಲಾಗಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಯ ದಿನಾಂಕವನ್ನು ಮರು ನಿಗದಿಗೊಳಿಸಲಾಗಿದೆ.
ಜುಲೈ 25ರಂದು ಪರೀಕ್ಷೆಯು ನಡೆಯಲಿದೆ ಎಂದು ಪರೀಕ್ಷೆಯನ್ನು ಆಯೋಜಿಸುವ ಮೈಸೂರು ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮೊದಲು ಏಪ್ರಿಲ್ 11ರಂದು ಕೆ- ಸೆಟ್ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ದೇಶದಲ್ಲಿ ಕರೊನಾ ಸೋಂಕು ಹೆಚ್ಚಾದ ಕಾರಣ ಎರಡನೇ ಹಂತದ ಲಾಕ್ಡೌನ್ ಹೇರಲಾಗಿತ್ತು.
ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿ ವಿಶ್ವವಿದ್ಯಾಲಯವು ಆದೇಶಹೊರಡಿಸಿತ್ತು. ಈಗ ಮತ್ತೆ ದಿನಾಂಕವನ್ನು ನಿಗದಿ ಮಾಡಿ ಮೈಸೂರು ವಿವಿ ಪ್ರಕಟಣೆ ಹೊರಡಿಸಿದೆ.
ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್ಸೈಟನ್ನು ಸಂಪರ್ಕಿಸಬಹುದು : https://kset.uni-mysore.ac.in/