Ad Widget .

ಮಂಡ್ಯದ ಕೆರಗೋಡಿನಲ್ಲಿ ಉದ್ವಿಗ್ನ ಸ್ಥಿತಿ|ಬ್ಯಾರಿಕೇಡ್ ಕಿತ್ತಾಕಿ ಪ್ರತಿಭಟನಾಕಾರರ ಆಕ್ರೋಶ

ಸಮಗ್ರ ನ್ಯೂಸ್: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿರುವ ಹನುಮ ಧ್ವಜವನ್ನು ತೆರವುಗೊಳಿಸಲು ಬಂದಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿಚಾರ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಪೊಲೀಸರು ಆಗಮಿಸಿ ಧ್ವಜವನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಇದಕ್ಕೆ ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, 144 ಸೆಕ್ಷನ್​ ಜಾರಿಯಾಗಿದೆ. ಆದರೂ ಕೂಡ ಪ್ರತಿಭಟನೆ ಮುಂದುವರೆಸಿದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ

Ad Widget . Ad Widget . Ad Widget .

ಜನವರಿ 22 ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಇದರ ನೆನಪಾಗಿ ಗ್ರಾಮಸ್ಥರು ಗ್ರಾಮದಲ್ಲಿ 108 ಅಡಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಧ್ವಜ ಹಾರಾಟದ ಬಗ್ಗೆ ಗ್ರಾಮ ಪಂಚಾಯತ್​ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು. 22 ಸದಸ್ಯ ಬಲದ ಗ್ರಾಮ ಪಂಚಾಯಿತಿಯಲ್ಲಿ ಹನುಮ ಧ್ವಜ ಹಾರಾಟಕ್ಕೆ 20 ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಬಳಿಕ ಗ್ರಾಮ ಪಂಚಾಯತ್​ ಸದಸ್ಯರು ನಡಾವಳಿ ರಚಿಸಿ, ವಿವಾದ ಇತ್ಯರ್ಥ ಪಡಿಸಿದ್ದರು.

ಆದರೆ ಸರ್ಕಾರಿ ಜಾಗದಲ್ಲಿ ಹನುಮ ಧ್ವಜ ಹಾರಿಸಲಾಗಿದೆ ಎಂಬ ಕಾರಣ ನೀಡಿ ಕೆಲ ದಿನಗಳ ನಂತರ ಮೇಲಾಧಿಕಾರಿಗಳು ಧ್ವಜ ತೆರವುಗೊಳಿಸುವಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯ ಅಧಿಕಾರಗಳ ಮೌಖಿಕ ಆದೇಶದಂತೆ ಹನುಮ ಧ್ವಜ ತೆರವು ಮಾಡಲು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀಣಾ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ಭಜರಂಗದಳ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಾಣ ಬಿಟ್ಟರು ಧ್ವಜ ಇಳಿಸಲ್ಲ ಎಂದು ಪಟ್ಟು ಹಿಡಿದರು. ಅಲ್ಲದೇ ಇದರ ಹಿಂದೆ ಕಾಂಗ್ರೆಸ್ ಶಾಸಕ, ಸಚಿವರ ಷಡ್ಯಂತ್ರ ಇದೆ ಎಂದು ಆರೋಪ ಮಾಡಿದರು. ಅಧಿಕಾರಿಗಳು ಹನುಮಾನ್ ಧ್ವಜ ತೆರವು ಗೊಳಿಸಿ ರಾಷ್ಟ್ರಧ್ವಜ ಹಾರಿಸಲಾಯಿತು.

ಕೆರಗೋಡು ಉದ್ವಿಗ್ನ ವಾತಾವರಣಕ್ಕೆ ಗುರಿಯಾಗಿದ್ದು ಗ್ರಾಮಸ್ಥರು ಬ್ಯಾರಿಕೇಡ್ ತಳ್ಳಿ ನುಗ್ಗಲು ಮುಂದಾಗಿದ್ದರು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಸಿಕ್ಕಸಿಕ್ಕವರ ಮೇಲೆ ಲಾಠಿ ಚಾರ್ಜ್ ಮಾಡಲಾಯಿತು. ಲಾಠಿ ಚಾರ್ಜ್ ವೇಳೆ ಗ್ರಾಮಸ್ಥರ ತಲೆ, ಕುತ್ತಿಗೆಗಳಿಗೆ ಗಾಯಗಳಾಗಿವೆ. ನಂತರ ಸಹಜ ಸ್ಥಿತಿಯತ್ತ ಗ್ರಾಮ ಮಾರ್ಪಟ್ಟಿತು.

ಸ್ಥಳಕ್ಕೆ ಆಗಮಿಸಿದ ವಿಪಕ್ಷ ನಾಯಕ‌ ಆರ್. ಅಶೋಕ್ ಗೂಂಡಾ ಸರ್ಕಾರ ಇದು, ಈ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ಯಾ ಎಂದು ವಾಗ್ದಾಳಿ ನಡೆಸಿದರು

Leave a Comment

Your email address will not be published. Required fields are marked *