ಸಮಗ್ರ ನ್ಯೂಸ್: ಬಿಗ್ಬಾಸ್ ಕನ್ನಡ ಸೀಸನ್ 10 ಮುಗಿದಿದ್ದು, ಕಠಿಣ ಸ್ಪರ್ಧೆಯ ನಡುವೆ ಕಾರ್ತಿಕ್ ಮಹೇಶ್ ಗೆಲುವು ಸಾಧಿಸಿದ್ದಾರೆ. 112 ದಿನಗಳ ಸುದೀರ್ಘ ಪಯಣ ಇಂದು ಅಂತ್ಯವಾಗಿದೆ. ಬಿಗ್ಬಾಸ್ ಗೆಲ್ಲಲು 16 ಮಂದಿಯಿಂದ ಪ್ರಾರಂಭವಾದ ಓಟದಲ್ಲಿ ಕೊನೆಯದಾಗಿ ಗೆಲುವು ಕಂಡಿರುವುದು ಕಾರ್ತಿಕ್ ಮಹೇಶ್.
ಕೊನೆಯ ಕ್ಷಣದಲ್ಲಿ ಬಿಗ್ಬಾಸ್ ಮನೆಗೆ ಬರಲು ತೆಗೆದುಕೊಂಡ ನಿರ್ಣಯ ಅವರ ಕೈಹಿಡಿದಿದೆ. ಹಲವು ಏಳು-ಬೀಳುಗಳಿದ್ದ ಪಯಣದಲ್ಲಿ ಕಾರ್ತಿಕ್ ಮಹೇಶ್ ಗಮ್ಯ ತಲುಪಿದ್ದಾರೆ. ಅವರಿಗೆ ಬರೋಬ್ಬರಿ 2,97,39,904 ಮತ ಗಳಿಸಿದ್ದಾರೆ. ಹಲವು ಏಳು-ಬೀಳು, ನೋವು, ಬೇಸರ, ಖುಷಿಗಳನ್ನು ಸಹ ಕಂಡಿದ್ದ ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.
ಸ್ವತಃ ಕಾರ್ತಿಕ್ ಮಹೇಶ್ ಹೇಳಿಕೊಂಡಿರುವಂತೆ ಬಿಗ್ಬಾಸ್ಗೆ ಬರುವ ನಿರ್ಧಾರವನ್ನು ಒಂದೇ ದಿನದಲ್ಲಿ ತೆಗೆದುಕೊಂಡು ಅವರು ಬಿಗ್ಬಾಸ್ಗೆ ಬಂದರಂತೆ. ಆ ಆತುರದ ನಿರ್ಧಾರ ಅವರಿಗೆ ಗೆಲುವು ತಂದುಕೊಟ್ಟಿದೆ. ಆರನೇ ಕಂಟೆಸ್ಟೆಂಟ್ ಆಗಿ ಕಷ್ಟದಲ್ಲೇ ಕಾರ್ತಿಕ್ ಮಹೇಶ್ ಫಿನಾಲೆ ವಾರಕ್ಕೆ ಬಂದಿದ್ದರು. ಫಿನಾಲೆ ವಾರದಲ್ಲಿ ಯಾರು ಮನೆಯಿಂದ ಹೊರಗೆ ಹೋಗುತ್ತಾರೆ ಎಂದಾಗ ಬಹುತೇಕರು ಕಾರ್ತಿಕ್ ಹೆಸರನ್ನು ಹೇಳಿದ್ದರು. ಆದರೆ ಅದೆಲ್ಲವೂ ಸುಳ್ಳಾಗಿದೆ.