ಸಮಗ್ರ ಉದ್ಯೋಗ: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮೋಟಾರ್ ವೆಹಿಕಲ್ ಮೆಕ್ಯಾನಿಕ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 30, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು.
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಿಹಾರದ ಪಾಟ್ನಾದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಡ್ರೈವಿಂಗ್ ಲೈಸೆನ್ಸ್
ಕಾಂಪಿಟೇಟಿವ್ ಟ್ರೇಡ್ ಟೆಸ್ಟ್
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ವ್ಯವಸ್ಥಾಪಕರ ಕಚೇರಿ
ಮೇಲ್ ಮೋಟಾರ್ ಸೇವೆ
GPO ಕ್ಯಾಂಪಸ್
ಪಾಟ್ನಾ-800001
ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.