ಸಮಗ್ರ ನ್ಯೂಸ್: ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಬುಧವಾರ ಚಂಪೈ ಸೊರೆನ್ ಅವರನ್ನು ಜಾರ್ಖಂಡ್‌ನ ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಜಾರ್ಖಂಡ್‌ನ ಹಾಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಇಡಿ ಬಂಧಿಸಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ. ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದು, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಇದನ್ನು ಅಂಗೀಕರಿಸಿದ್ದಾರೆ.
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಇಡಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ರಾಂಚಿಯಲ್ಲಿ ವಿಚಾರಣೆ ನಡೆಸುತ್ತಿದೆ.
ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಇಡಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ರಾಂಚಿಯಲ್ಲಿ ವಿಚಾರಣೆ ನಡೆಸುತ್ತಿದೆ. ಈ ನಡುವೆಯೇ ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದು, ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಚಂಪೈ ಸೊರೆನ್ ಅವರನ್ನು ಮುಂದಿನ ಸಿಎಂ ಆಗಿ ಮಾಡಿದೆ.