ಸಮಗ್ರ ನ್ಯೂಸ್: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಬಳಿಕ ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ಬಾಲ ರಾಮನ ವೀಕ್ಷಣೆಗಾಗಿ ದೇವಾಲಯಕ್ಕೆ ಭೇಟಿ ನೀಡಿದ್ದು, 11 ಕೋಟಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಟ್ರಸ್ಟ್‍ನ ಉಸ್ತುವಾರಿ ಪ್ರಕಾಶ್ ಗುಪ್ತಾ ಮಾಹಿತಿ ನೀಡಿದ್ದಾರೆ.
ಸುಮಾರು 8 ಕೋಟಿ ಕಾಣಿಕೆ ಹುಂಡಿಯಲ್ಲಿ ಮತ್ತು ಚೆಕ್ ಮತ್ತು ಆನ್‍ಲೈನ್ ಮೂಲಕ ಸುಮಾರು 3.50 ಕೋಟಿ ರೂಪಾಯಿ ಕಳೆದ 11 ದಿನಗಳಲ್ಲಿ ಸಂಗ್ರಹವಾಗಿದೆ. ಅದಲ್ಲದೇ 10 ಗಣಕೀಕೃತ ಕೌಂಟರ್‍ಗಳಲ್ಲಿಯೂ ಜನರು ದೇಣಿಗೆ ನೀಡಿದ್ದಾರೆ.
11 ಬ್ಯಾಂಕ್ ಉದ್ಯೋಗಿಗಳು ಮತ್ತು ದೇವಸ್ಥಾನದ ಟ್ರಸ್ಟ್‍ನ ಮೂವರನ್ನು ಒಳಗೊಂಡ 14 ಜನರ ತಂಡವು ನಾಲ್ಕು ಕಾಣಿಕೆ ಹುಂಡಿಗಳಲ್ಲಿನ ಹಣವನ್ನು ಎಣಿಸುತ್ತಾರೆ. ಎಲ್ಲವನ್ನೂ ಸಿಸಿಟಿವಿ ಕ್ಯಾಮೆರಾಗಳ ಕಣ್ಣಾವಲಿನಲ್ಲಿ ಮಾಡಲಾಗುತ್ತದೆ ಎಂದು ಗುಪ್ತಾ ಮಾಹಿತಿ ನೀಡಿದ್ದಾರೆ