ಇಂದಿನಿಂದ ಮೂರು ದಿನ ಹಂಪಿ ಉತ್ಸವ/ ಸಿಎಂ ಸಿದ್ದರಾಮಯ್ಯ ಚಾಲನೆ

ಸಮಗ್ರ ನ್ಯೂಸ್: ದೇಶದ್ಯಾಂತ ಪ್ರಸಿದ್ಧಿ ಹೊಂದಿರುವ ಐತಿಹಾಸಿಕ ಹಂಪಿ ಉತ್ಸವ ಇಂದಿನಿಂದ ಮೂರು ದಿನಗಳು ನಡೆಯಲಿದ್ದು, ಉತ್ಸವಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಬಾರಿ ರಾಜ್ಯದ ಬರ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಸರಳವಾದ ಹಂಪಿ ಉತ್ಸವ ಆಚರಣೆ ಮಾಡಲಾಗುತ್ತಿದ್ದು, ವಿವಿಧ ರೀತಿಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.

. Ad Widget . Ad Widget . Ad Widget .

ರಾತ್ರಿ ಎಂಟು ಗಂಟೆಗೆ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಇತರ ಸಚಿವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ವಿಜಯನಗರ ಜಿಲ್ಲಾಡಳಿತ ಉತ್ಸವಕ್ಕೆ ಒಟ್ಟಾರೆ 17 ಕೋಟಿ ರೂಪಾಯಿ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಸರ್ಕಾರ 14 ಕೋಟಿ ರೂಪಾಯಿ ನೀಡಿದೆ. ಇನ್ನುಳಿದ ಹಣವನ್ನು ಸ್ಥಳೀಯರಿಂದ ಪಡೆಯಲಾಗಿದೆ.
ಗ್ರಾಮೀಣ ಕ್ರೀಡೆ, ರಂಗೋಲಿ ಸ್ಪರ್ಧೆ, ಸಂಗೀತ ಹಾಗೂ ನೃತ್ಯ ಸ್ಪರ್ಧೆ, ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿದೆ. ಪ್ರಸಿದ್ಧ ಗಾಯಕರು, ಕಲಾವಿದರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *