ಸಮಗ್ರ ನ್ಯೂಸ್: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದ್ದು, ಈ ವೇಳೆ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಬೆಂಕಿಗಾಹುತಿಯಾದ ಘಟನೆ ಜ. 31ರಂದು ತಡರಾತ್ರಿ ನಗರದ ಹೊರವಲಯದ ಕುಡುಪು ಬೈತುರ್ಲಿ ಜಂಕ್ಷನ್ ಸಮೀಪ ನಡೆದಿದೆ.
ಕಾರು ಚಾಲಕ ಕರಣ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕುಡುಪು ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಾರಿನೊಳಗೆ ಸಿಲುಕಿದ್ದ ಚಾಲಕನನ್ನು ಅದೇ ದಾರಿಯಲ್ಲಿ ಹೋಗುತ್ತಿದ್ದ ಲಾರಿಯವರು ನಿಲ್ಲಿಸಿ ಹೊರಗೆಳೆದಿದ್ದಾರೆ. ಕದ್ರಿ ಪೊಲೀಸರು ಸ್ಥಳಕ್ಕೆ ತೆರಳಿ ಬೆಂಕಿ ಶಮನ ಕಾರ್ಯಾಚರಣೆ ನಡೆಸಿದ್ದಾರೆ. ಕಾರು ಸಂಪೂರ್ಣ ಹೊತ್ತಿ ಉರಿದಿದೆ.






