ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ ರಾಜ್​ ಇಲಾಖೆಯಲ್ಲಿ ಉದ್ಯೋಗಕ್ಕೆ ಆಹ್ವಾನ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: Rural Development and Panchayat Raj Department Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 51 ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget ... ..

ಶೈಕ್ಷಣಿಕ ಅರ್ಹತೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ, ಎಂ.ಫಿಲ್, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

Ad Widget

ಅನುಭವ:
ಅಭಿವೃದ್ಧಿ ವಲಯದಲ್ಲಿ ಕನಿಷ್ಠ 1 ರಿಂದ 2 ವರ್ಷಗಳ ಕ್ಷೇತ್ರ ಅನುಭವ ಹೊಂದಿರುವ ಪದವೀಧರರನ್ನು ಆಯ್ಕೆಗೆ ಮಾತ್ರ ಪರಿಗಣಿಸಲಾಗುತ್ತದೆ.

ಗ್ರಾಮೀಣ ಅಭಿವೃದ್ಧಿಯಲ್ಲಿನ ಕ್ಷೇತ್ರ ಅನುಭವವನ್ನು ಹೆಚ್ಚುವರಿ ಅಂಕಗಳೊಂದಿಗೆ ಪರಿಗಣಿಸಲಾಗುತ್ತದೆ.

ಕಾರ್ಯಕ್ರಮದ ಮೌಲ್ಯಮಾಪನಕ್ಕೆ ಒಳಪಟ್ಟು ಕ್ಷೇತ್ರ ಮಟ್ಟದ ಅನುಭವದೊಂದಿಗೆ ಸ್ನಾತಕೋತ್ತರ ಪದವೀಧರರಿಗೆ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ:
ಮಾಸಿಕ ₹ 60,000

ಉದ್ಯೋಗದ ಸ್ಥಳ:
ಬೀದರ್
ಕಲಬುರಗಿ
ರಾಯಚೂರು
ಯಾದಗಿರಿ

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಆಪ್ಟಿಟ್ಯೂಡ್ ಎವಾಲ್ಯುಯೇಷನ್
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://crispindia.net/rgpr-fellowship-karnataka/application_form.php online apply

Leave a Comment

Your email address will not be published. Required fields are marked *