ಬಂಟ್ವಾಳ: ಟಯರ್ ಸ್ಫೋಟಗೊಂಡು ರಿಕ್ಷಾಗೆ ಡಿಕ್ಕಿ ಹೊಡೆದ KSRTC ಬಸ್| ನಾಲ್ವರು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್: ಟಯರ್ ಒಡೆದು ಹೋದ ಪರಿಣಾಮ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ರಿಕ್ಷಾಕ್ಕೆ ಡಿಕ್ಕಿಯಾಗಿ ಬಳಿಕ ಚರಂಡಿಗೆ ಬಿದ್ದ ಘಟನೆ ಬಂಟ್ವಾಳ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಎನ್.ಸಿ.ರೋಡ್ ಎಂಬಲ್ಲಿ ಇಂದು(ಫೆ.5) ಸಂಜೆ ವೇಳೆ ನಡೆದಿದೆ.

Ad Widget ... ..

ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ಧ ಕೆ‌ಎಸ್.ಆರ್.ಟಿಸಿ ಬಸ್ ನ ಟಯರ್ ಕಾವಳಮೂಡೂರು ಎನ್.ಸಿ.ರೋಡ್ ತಲುಪುತ್ತಿದ್ಧಂತೆ ಸ್ಪೋಟಗೊಂಡಿದೆ. ಟಯರ್ ಒಡೆದು ಹೋದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿ ನಿಲ್ಲಿಸಲಾಗಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾಗಿದೆ.

Ad Widget

ಅದೃಷ್ಟವಶಾತ್ ರಿಕ್ಷಾದಲ್ಲಿ ಬಾಡಿಗೆ ಮಾಡಿಕೊಂಡು ಬಂದಿದ್ದ ಪ್ರಯಾಣಿಕರು ಅಂಗಡಿಗೆ ಹೋಗಿದ್ದರಿಂದ ಸೇಫ್ ಆಗಿದ್ದಾರೆ. ಬಳಿಕ ಬಸ್ ಚರಂಡಿಗೆ ಬಿದ್ದು ಪಲ್ಟಿಯಾಗಿದೆ. ಸಂಚಾರಿ ಪೊಲೀಸರು ಸ್ತಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *