Ad Widget .

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ|ಭಾರತೀಯ ಹಾಕಿ ತಂಡದ ಆಟಗಾರನ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ಹಾಕಿ ತಂಡದ ಡಿಫೆಂಡರ್ ಆಗಿರುವ ವರುಣ್ ಕುಮಾರ್ ಅವರ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

2021ನೇ ಸಾಲಿನ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ವರುಣ್ ಕುಮಾರ್ ವಿರುದ್ಧ ಯುವತಿ ಗಂಭೀರ ಆರೋಪ ಮಾಡಿದ್ದು ಪೋಕ್ಸೋ ಪ್ರಕರಣ ದಾಖಲಾಗಿದೆ. ಯುವತಿ 17ನೇ ವಯಸ್ಸಿನಲ್ಲಿ ಇರುವಾಗಲೇ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವುದಾಗಿ ಯುವತಿ ಆರೋಪ ಮಾಡಿದ್ದಾಳೆ.

Ad Widget . Ad Widget . Ad Widget .

ದೂರುದಾರ ಯುವತಿ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಸ್ಟೆಲ್​ನಲ್ಲಿ ತಂಗಿದ್ದಳು. ಅಪ್ರಾಪ್ತೆಯಾಗಿದ್ದ ಯುವತಿಗೆ ಸಾಮಾಜಿಕ ಜಾಲತಾಣದ ಮೂಲಕ ಹಾಕಿ ಆಟಗಾರ ವರುಣ್ ಕುಮಾರ್ ಪರಿಚಯವಾಗಿತ್ತು. 17 ವರ್ಷದವಳಾಗಿದ್ದ ದೂರುದಾರಳನ್ನ ಪ್ರೀತಿಸುವುದಾಗಿ ನಂಬಿಸಿದ್ದ ಹಾಕಿ ಆಟಗಾರ, ‘ನಿನ್ನ ಮನೆಯವರನ್ನ ಒಪ್ಪಿಸಿ ಮದುವೆಯಾಗುತ್ತೇನೆ. ಅಲ್ಲಿಯವರೆಗೂ ಪ್ರೇಮಿಗಳಾಗಿ ಇರೋಣ’ ಎಂದು ನಂಬಿಸಿದ್ದರು. ಆಕೆ 17 ವರ್ಷದವಳಿರುವಾಗಲೇ ಪ್ರೀತಿ, ಪ್ರೇಮ ಎಂದು ನಂಬಿಸಿ ಮದುವೆಯಾಗುವುದಾಗಿ ಮಾತು ಕೊಟ್ಟು ದೈಹಿಕ ಸಂಪರ್ಕ ಮಾಡಿದ್ದ. ಆದರೆ ಈಗ ಮದುವೆಯಾಗದೇ ವಂಚನೆ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

Leave a Comment

Your email address will not be published. Required fields are marked *