ಬಾಗಲಕೋಟೆಯ ಜನಪ್ರಿಯ ನೆಪ್ರೊಲಜಿಸ್ಟ್ ಡಾ. ಸಂದೀಪ್ ಹುಯಿಲಗೋಳ ಅವರು ಒಂದಿಷ್ಟು ಸಮಾನಾಸಕ್ತ ತಂಡವನ್ನು ಕಟ್ಟಿಕೊಂಡು ಆರಂಭಿಸಿದ ಪ್ರಿಪೆಡ್ ಕಲಿಕಾ ಆಪ್‌ಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಮುಖ್ಯವಾಗಿ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಕೇರ್ ವಿದ್ಯಾರ್ಥಿಗಳಿಗೆ, ಇಂಗ್ಲಿಷ್‌ನಲ್ಲಿ ಕಲಿಯುವುದು ಕಷ್ಟ ಎನ್ನುವವರಿಗೆ ಈ ವೈದ್ಯರ ತಂಡವು ಸರಳವಾಗಿ ಆಪ್ ಮೂಲಕ ಬೋಧಿಸುತ್ತಿದೆ.
ಶೈಕ್ಷಣಿಕ ಹಬ್ ಆದ ಬಾಗಲಕೋಟೆಯ ಡಾ. ಸಂದೀಪ್ ಅವರು ಕನ್ನಡ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಬೋಧಿಸುವ ವಿಶೇಷ ಸೇವೆ ಪರಿಚಯಿಸಿದ್ದಾರೆ. ಈ ಕುರಿತು ನಮ್ಮ ವೆಬ್‌ಸೈಟ್‌ನಲ್ಲಿ ಈ ಹಿಂದೆಯೇ ಲೇಖನವನ್ನೊಂದನ್ನು ಪ್ರಕಟಿಸಿದ್ದೇವು. ಈ ಆಪ್ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ? ಎನ್ನುವ ವಿವರ ಇಲ್ಲಿದೆ.
ಹಂತ ೧
www.preped.in ವೆಬ್‌ಸೈಟ್‌ನಲ್ಲಿ ಆಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್ ನೀಡಲಾಗಿದೆ. ಡೌನ್‌ಲೋಡ್ ಆಪ್ ಆಯ್ಕೆಯನ್ನು ಕ್ಲಿಕ್ ಮಾಡಿ. ನಿಮ್ಮಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನರ್ ಇದ್ದರೆ ಅದರ ಮೂಲಕವೂ ಡೌನ್‌ಲೋಡ್ ಕೊಡಬಹುದು.
ಹಂತ ೨
ಅಪ್‌ಗೆ ಸಂಬಂಧಪಟ್ಟ ಒಂದು ಎಪಿಕೆ ಫೈಲ್ ಡೌನ್‌ಲೋಡ್ ಆಗುತ್ತದೆ.
ಅದನ್ನು ಕ್ಲಿಕ್ ಮಾಡಿ ಇನ್ಸ್ಟಾಲ್ ಕೊಟ್ಟರೆ ನಿಮ್ಮ ಮೊಬೈಲ್‌ನಲ್ಲಿ ಈ ಆಪ್ ಸ್ಥಾಪನೆಯಾಗುತ್ತದೆ.
ಗೊತ್ತಿಲ್ಲದ ಮೂಲದ್ದು ಎಂಬ ಆಯ್ಕೆಯಲ್ಲಿ ಅನುಮತಿ ನೀಡಿ,ಗೂಗಲ್ ಪ್ಲೇ ಸ್ಟೋರ್ ಹೊರತುಪಡಿಸಿದ ಆಪ್‌ಗಳಿಗೆ ಹೀಗೆ ಅನುಮತಿ ಕೇಳಲಾಗುತ್ತದೆ.
ಗೂಗಲ್ ಪ್ಲೇ ಸ್ಟೋರ್‌ನವರಿಗೆ ಕಮಿಷನ್ ಹೆಚ್ಚು ಕೊಡಬೇಕಿರುವುದರಿಂದ, ವಿದ್ಯಾರ್ಥಿಗಳಿಗೆ ಆಪ್ ದುಬಾರಿಯಾಗಬಾರದು ಎನ್ನುವ ಕಾರಣಕ್ಕೆ ಸದ್ಯ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಈ ಆಪ್ ಅನ್ನು ಪರಿಚಯಿಸಲಾಗಿಲ್ಲ ಎಂದು ಡಾ. ಸಂದೀಪ್ ಮಾಹಿತಿ ನೀಡಿದ್ದಾರೆ.
ಹಂತ ೩
ಆಪ್ ತೆರೆಯಿರಿ. ನಿಮ್ಮ ಮೊಬೈಲ್ ಸಂಖ್ಯೆ ನಮೂದಿಸಿ. ಒಟಿಪಿ ಬರುತ್ತದೆ. ಆ ಒಟಿಪಿ ಹಾಕಿ ಲಾಗಿನ್ ಆಗಿ. ಪುಟ್ಟ ಆಪ್‌ನೊಳಗೆ ಇರುವ ನೂರಾರು ವಿಡಿಯೋಗಳಲ್ಲಿ ನಿಮಗೆ ಬೇಕಾದ ಶೈಕ್ಷಣಿಕ ವಿಡಿಯೋವನ್ನು ನೋಡಿ. ಕಲಿಯಿರಿ.
Preped ವಿಶೇಷತೆಗಳೇನು?
• ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಗೆ ಸಂಬಂಧಪಟ್ಟ ಕೋರ್ಸ್ಗಳನ್ನು ಅತ್ಯಂತ ಕಡಿಮೆ ಶುಲ್ಕದಲ್ಲಿ ಕಲಿಯುವ ಅವಕಾಶ. (ಕೇವಲ 300 ರೂ, 500 ರೂ. ಗೆ ಇಂತಹ ಕೋರ್ಸ್ಗೆ ಸೇರಬಹುದಾಗಿದೆ).
• ಕನ್ನಡ ವಿದ್ಯಾರ್ಥಿಗಳನ್ನುಗಮನದಲ್ಲಿಟ್ಟುಕೊಂಡು ನರ್ಸಿಂಗ್, ಪ್ಯಾರಮೆಡಿಕಲ್, ಅಲೈಡ್ ಹೆಲ್ತ್ಕೇರ್ ಸಬ್ಜೆಕ್ಟ್ಗಳನ್ನು ಅತ್ಯಂತ ಸರಳವಾಗಿ ಅರ್ಥ ಮಾಡಿಸುವ ಪ್ರಯತ್ನ ಇದಾಗಿದೆ.
• ಗುಣಮಟ್ಟದ ಶಿಕ್ಷಣ ಎಲ್ಲರಿಗೂ ದೊರಕಬೇಕುಎನ್ನುವುದು preped.in ಕಾಳಜಿ. ಈ ವಿಶೇಷ ಕೋರ್ಸ್ಗಳಿಗೆ ಸೇರಿದ ವಿದ್ಯಾರ್ಥಿಗಳು ತಮ್ಮ ನರ್ಸಿಂಗ್, ಪ್ಯಾರಮೆಡಿಕಲ್, ಅಲೈಡ್ ಹೆಲ್ತ್ಕೇರ್ ಕೋರ್ಸ್ಗಳನ್ನು ಅತ್ಯಂತ ಸುಲಭವಾಗಿ ಪಾಸ್ ಆಗಬಹುದು.
• Preped. ಇನ್ ವೆಬ್ ಮತ್ತು ಆಪ್‌ನಲ್ಲಿ ೫೦೦ಕ್ಕೂ ಹೆಚ್ಚು ವಿಡಿಯೋ ಲೆಕ್ಚರರ್ಗಳನ್ನು ಅಪ್ಲೋಡ್ ಮಾಡಲಾಗಿದೆ. ಸ್ಥಳೀಯ ಭಾಷೆಯಲ್ಲಿ ಬೋಧಕರು ಬೋಧಿಸುವುದು ಇದರ ವಿಶೇಷ. ಮುಖ್ಯವಾಗಿ ಕನ್ನಡಿಗರಿಗೆ ಕನ್ನಡ ಭಾಷೆಯಲ್ಲಿ ಕಲಿಯಲು ಸಾಧ್ಯವಾಗಲಿದೆ. ಶೀಘ್ರದಲ್ಲಿ ಕೋರ್ಸ್‌ಗಳನ್ನು ಕಲಿಯಬಹುದು.
• ೧೦ನೇ ತರಗತಿ ಬಳಿಕದ ನರ್ಸಿಂಗ್, ಪ್ಯಾರಮೆಡಿಕಲ್, ಅಲೈಡ್ ಹೆಲ್ತ್‌ಕೇರ್ ವಿಷಯಗಳನ್ನುಕಲಿಯಬಹುದು.
ಪ್ರಿಪೇರ್ ಎಜುಟೆಕ್ ವೆಬ್ಸೈಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ
ಪ್ರಿಪೇರ್ ಎಜುಟೆಕ್ ಅವರ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ.