ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹೊತ್ತಲ್ಲೆ ಸಿಎಂ ಜನತಾದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಇಂದು ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.
ಈಗಾಗಲೇ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗಿದೆ. ಇಂದು ಇಡೀ ದಿನ ಜನಸ್ಪಂದನ ಕಾರ್ಯದಲ್ಲಿ ಸಿಎಂ ತೊಡಗಿಸಿಕೊಳ್ಳಲಿದ್ದಾರೆ. ಇಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಜನಸ್ಪಂದನ ನಡೆಯಲಿದೆ. ಜನಸ್ಪಂದನ ಕಾರ್ಯಕ್ರಮಕ್ಕೆ ವಿಧಾನಸೌಧದಲ್ಲಿ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟಪ್ಸ್ ಮುಂಭಾಗ ಸಿಎಂ ಜನಸ್ಪಂದನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೃಹತ್ ಜರ್ಮನ್ ಟಂಟ್ ಹಾಕಲಾಗಿದೆ. 10 ಸಾವಿರಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದೆ. 20 ಬೃಹತ್ ಎಲ್ ಇಡಿ ಸ್ಕ್ರೀನ್ ಅಳವಡಿಸಿದ್ದಾರೆ. ಈಗಾಗಲೇ ಜನಸ್ಪಂದನಾ ಕಾರ್ಯಕ್ರಮಕ್ಕೆ ಜನಸಾಗರ ಹರಿದು ಬಂದಿದೆ.
ಸಾರ್ವಜನಿಕರು ತಮ್ಮ ಗುರುತಿನ ಚೀಟಿಯೊಂದಿಗೆ ಅಂದರೆ ಆಧಾರ್ ಅಥವಾ ಪಡಿತರ ಕಾರ್ಡ್ ನೊಂದಿಗೆ ಬಂದು ರಿಜಿಸ್ಟರ್ ಮಾಡಿಕೊಳ್ಳಬೇಕು. ರಿಜಿಸ್ಟರ್ ಮಾಡಿಕೊಳ್ಳುವಾಗ ಯಾವ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಎಂದು ನೋಡಿ ಆ ಇಲಾಖೆಯ ಕೌಂಟರ್ ನಂಬರ್ ಕೊಡಲಾಗುತ್ತೆ. ಆ ಕೌಂಟರ್ ನಂಬರ್ ಬಳಿ ಹೋಗಿ ತಮ್ಮ ಮನವಿಯನ್ನ ಸಾರ್ವಜನಿಕರು ಕೊಡಬಹುದು. ಇದಕ್ಕಾಗಿ 36 ವಿವಿಧ ಇಲಾಖೆಯ ಕೌಂಟರ್ ಗಳನ್ನ ತೆರೆಯಲಾಗಿದೆ. ಕೌಂಟರ್ ಗಳಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೇ ಖುದ್ದು ಸಾರ್ವಜನಿಕ ಮನವಿ ಸ್ವೀಕರಿಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯನವರೇ ಖುದ್ದು ಆ ಕೌಂಟರ್ ಗಳಿಗೆ ತೆರಳಿ ಅರ್ಜಿಯನ್ನ ನೋಡಲಿದ್ದಾರೆ. ಇದಕ್ಕಾಗಿ ಈಗಾಗಲೇ ಎಲ್ಲಾ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸ್ಥಳದಲ್ಲೇ ಇರಲು ಸೂಚಿಸಲಾಗಿದೆ.
1902 ನಂಬರ್ ಗೆ ಕರೆ ಮಾಡಿ ನೊಂದಾಯಿಸಿಕೊಳ್ಳಬಹುದು. ವಿಧಾಸೌಧದವರೆಗೆ ಉಚಿತ ಬಸ್ ವ್ಯವಸ್ಥೆ ಇದೆ.