ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬೆಳ್ಳಾರೆ – ಸುಬ್ರಹ್ಮಣ್ಯ ಹೆದ್ದಾರಿಯ ಪಾಜಪಳ್ಳ ಬಳಿ ಸಂಭವಿಸಿದೆ.
ಬೆಳ್ಳಾರೆಯಿಂದ ನಿಂತಿಕಲ್ಲಿಗೆ ತೆರಳುತ್ತಿದ್ದ ಆಲ್ಟೋ ಕಾರು (KA19P9807) ಪಾಜಪಳ್ಳ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಾಲ್ಕು ಪಲ್ಟಿಯಾಗಿ ಪಕ್ಕದ ಚರಂಡಿಗೆ ಉರುಳಿದೆ. ಇದರಿಂದ ವಿದ್ಯುತ್ ಕಂಬಗಳು ಮುರಿದಿದ್ದು ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಚಾಲಕನ ಅತಿವೇಗದ ಅಜಾಗರೂಕತೆಯ ಚಾಲನೆಯೇ ಅವಘಡಕ್ಕೆ ಕಾರಣವೆಂದು ಹೇಳಲಾಗಿದೆ.






