Ad Widget .

ಲೋನ್ ಕೊಡಿಸೋದಾಗಿ ಹೇಳಿ ಕೋಟಿ ಕೋಟಿ ವಂಚನೆ…ನಿರ್ಮಲಾ ಸೀತಾರಾಮನ್ , RBI ಹೆಸರೇಳಿ ಪಂಗನಾಮ

ಸಮಗ್ರ ನ್ಯೂಸ್: ಲೋನ್ ಕೊಡಿಸೋದಾಗಿ ಹೇಳಿ ಮಹಿಳೆಯೊಬ್ಬಳು ಕೋಟಿ ಕೋಟಿ ವಂಚನೆ ಮಾಡಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ತಮಿಳುನಾಡಿನ ಹೊಸೂರು ಮೂಲದ ಪವಿತ್ರಾ ಈ ಪ್ರಕರಣದ ಆರೋಪಿ. ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡು ಜನರಿಗೆ ವಂಚಿಸಿದ್ದಾಳೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಷ್ಟೆ ಅಲ್ಲದೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಹೆಸರನ್ನು ಬಳಸಿಕೊಂಡು, ಬೇಕಾದಷ್ಟು ಸಾಲ ನೀಡುವುದಾಗಿ ಹಾಗೂ ಅರ್ಧದಷ್ಟು ಸಬ್ಸಿಡಿ ನೀಡುವುದಾಗಿ ಹೇಳಿ ಅಮಾಯಕರಿಂದ ಕೋಟಿ ರೂ. ಹಣ ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

Ad Widget . Ad Widget . Ad Widget .

ಟ್ರಸ್ಟ್‌ಗೆ ಆರ್‌ಬಿಐನಿಂದ 17 ಕೋಟಿ ರೂ. ಬಂದಿರುವುದಾಗಿ ಮೊದಲು ಈಕೆ ಜನರಿಗೆ ನಂಬಿಸಿದ್ದಾಳೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಹಿ ಇರುವಂತೆ ನಕಲಿ ಪತ್ರ ಸೃಷ್ಟಿಸಿಕೊಂಡು ಅದನ್ನು ತೋರಿಸಿದ್ದಾಳೆ. ಕಂತೆ ಕಂತೆ ಹಣದ ನೋಟುಗಳ ವಿಡಿಯೋಗಳನ್ನು ಕಳುಹಿಸಿ ಜನರನ್ನು ನಂಬಿಸಿದ್ದಳು. ಸುಲಭವಾಗಿ ಸಾಲ ಕೊಡುತ್ತೇನೆ. ಒಬ್ಬರಿಗೆ ಹತ್ತು ಲಕ್ಷ ಲೋನ್ ನೀಡಿದರೆ ಅದರಲ್ಲಿ ಐದು ಲಕ್ಷ ಸಬ್ಸಿಡಿ ಎಂದು ಹೇಳಿದ್ದಾಳೆ. ಆದರೆ ಲೋನ್ ಬೇಕು ಅಂದರೆ ಮೊದಲು ಹಣ ಡೆಪಾಸಿಟ್ ಮಾಡಬೇಕು ಎಂದು ಕಥೆ ಕಟ್ಟಿದ್ದಳು.

ಇದನ್ನೆಲ್ಲ ನಂಬಿದ ಜನರು ಒಂದು ಗುಂಪು ಮಾಡಿಕೊಂಡು ಈಕೆಗೆ ಲಕ್ಷಾಂತರ ರೂಪಾಯಿ ಹಣ ನೀಡಿದ್ದರು. ಸಿಕ್ಕ ಸಿಕ್ಕ ಕಡೆಗಳಲ್ಲಿ ಸಾಲ ಮಾಡಿ ಹಣ ಕೊಟ್ಟಿದ್ದರು. ತಿಂಗಳುಗಳು ಕಳೆದರೂ ಲೋನ್ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಸಾಲದ ಸುಳಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ. ಚಂದಾಪುರು, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ಈಕೆ ವಂಚನೆ ಮಾಡಿದ್ದು, ನೂರಾರು ಮಂದಿಗೆ ಪಂಗನಾಮ ಹಾಕಿದ್ದಾಳೆ. ಸೂರ್ಯನಗರದ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ವಂಚನೆ ಕುರಿತು ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *