ಸಚಿವ ರಾಮಲಿಂಗಾರೆಡ್ಡಿಗೆ ಬಂಧನ ಭೀತಿ| ಜಾಮೀನು ರಹಿತ ವಾರಂಟ್ ಜಾರಿ

ಸಮಗ್ರ ನ್ಯೂಸ್: ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೋರ್ಟ್ ಗೆ ನಿರಂತರವಾಗಿ ಗೈರಾಗಿದ್ದರ ಹಿನ್ನಲೆಯಲ್ಲಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ.

Ad Widget ... ..

ಬಿಜೆಪಿ ಸರ್ಕಾರದ ಅವಧಿಯಲ್ಲಿ, ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಯನ್ನು ನಡೆಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿಯೇ ಪಾದಯಾತ್ರೆ ಮಾಡಿದ್ದಂತ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು.

Ad Widget

ಇದೇ ರೀತಿಯಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧವೂ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಅವರು ಹಾಜರಾಗದೇ ನಿರಂತರವಾಗಿ ಗೈರಾಗಿದ್ದರು. ಪೊಲೀಸರ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಬಳಿಕ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿತ್ತು. ಆದರೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೋರ್ಟ್ ವಿಚಾರಣೆ ಹಾಜರಾಗಿರಲಿಲ್ಲ.

ಈ ಹಿನ್ನಲೆಯಲ್ಲಿ ರಾಮಲಿಂಗಾರೆಡ್ಡಿ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ ಜೆ.ಪ್ರೀತಂ ಅವರು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಆದೇಶಿಸಿದ್ದಾರೆ.

Leave a Comment

Your email address will not be published. Required fields are marked *