ಸಮಗ್ರ ನ್ಯೂಸ್: ಹಿಂದೂ ಜಾಗರಣಾ ವೇದಿಕೆ ಮುಖಂಡ ದಿನೇಶ್ ಪಂಜಿಗ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್ಗೆ ಮಾನ್ಯ ನ್ಯಾಯಾಲಯ ತಡೆ ನೀಡಿದೆ.
ಉಪವಿಭಾಗೀಯ ದಂಡಾಧಿಕಾರಿಯ ನೋಟಿಸ್ ಜಾರಿ ಕ್ರಮವನ್ನು ಪ್ರಶ್ನಿಸಿ ದಿನೇಶ್ ಪಂಜಿಗ ಹಾಗೂ ಯಶೋಧರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮಹೇಶ್ ಕಜೆ ನೋಟಿಸ್ ಜಾರಿ ಮಾಡಿದ್ದು ಸರಿಯಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು . ಅರ್ಜಿದಾರರ ಪರವಾದ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಗಡಿಪಾರು ನೊಟೀಸ್ಗೆ ತಡೆಯಾಜ್ಞೆ ನೀಡಿದ್ದಾರೆ.ಮತ್ತು ಆಪಾದಿತರ ವಿರುದ್ಧದ ಎಲ್ಲ ಕಡತಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ.