Ad Widget .

ಪ್ರಮುಖ ಆರು ಬೇಡಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ SDPI

ಸಮಗ್ರ ನ್ಯೂಸ್: ರಾಜ್ಯ ಸರಕಾರ ಈ ತಿಂಗಳು ಮಂಡಿಸಲಿರುವ ಮುಂಗಡ ಪತ್ರದಲ್ಲಿ ದ. ಕ. ಜಿಲ್ಲೆಯನ್ನು ವಿಶೇಷವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು, ಸರಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಪ್ರಮುಖ ಆರು ಬೇಡಿಕೆಗಳನ್ನು ಘೋಷಿಸಿ ಅಗತ್ಯ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿಡಬೇಕು ಎಂದು ಹಣಕಾಸು ಸಚಿವರು ಮುಖ್ಯಮಂತ್ರಿಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮೂಲಕ SDPI ದಕ್ಷಿಣ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

SDPI ಸಲ್ಲಿಸಿದ ಬೇಡಿಕೆಗಳು:
1)ದಕ್ಷಿಣ ಕನ್ನಡ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಹಾಗೂ ಸಾವಿರ ಬೆಡ್ಡುಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಘೋಷಣೆ ಮತ್ತು ಅಗತ್ಯ ಅನುದಾನ ಬಿಡುಗಡೆ

Ad Widget . Ad Widget . Ad Widget .

2)ಜಯದೇವ ಹೃದ್ರೋಗ ಆಸ್ಪತ್ರೆಯ ಘಟಕವನ್ನು ಮಂಗಳೂರಿನಲ್ಲಿ ತೆರೆಯಬೇಕು.

3)ಪುತ್ತೂರನ್ನು ಹೊಸ ಜಿಲ್ಲೆಯಾಗಿ ಘೋಷಿಸಬೇಕು.

4)ಕರಾವಳಿಯಲ್ಲಿ ಕೋಮುವಾದಿ ಶಕ್ತಿಗಳು ನಡೆಸುತ್ತಿರುವ ಅನೈತಿಕ ಪೊಲೀಸ್ ಗಿರಿ ಮತ್ತು ವ್ಯವಸ್ಥಿತ ಕೋಮುಗಲಭೆಗಳಿಗೆ ಅಂತ್ಯ ಹಾಡಲು ವಿಶೇಷ ಕಾರ್ಯಪಡೆ ರಚಿಸಬೇಕು ಮತ್ತು ಸಮಾಜದಲ್ಲಿ ಶಾಂತಿ ಕಾಪಾಡಲು ಸರಕಾರಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು, ಇದಕ್ಕಾಗಿ ನೂರು ಕೋಟಿ ಅನುದಾನ ಮೀಸಲಿಡಬೇಕು.

5) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಜ್ಜ್ ಭವನ ಮತ್ತು ಬ್ಯಾರಿ ಭವನ ನಿರ್ಮಿಸಬೇಕು.

6) ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಬೇಕು. ಇದಕ್ಕಾಗಿ ಪ್ರಥಮ ಹಂತದಲ್ಲಿ ಒಂದು ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಬೇಕು.

ಎಂಬ ಪ್ರಮುಖ ಆರು ಬೇಡಿಕೆಗಳನ್ನು ಮುಂಬರುವ ಬಜೆಟ್ ನಲ್ಲಿ ಘೋಷಣೆ ಮಾಡಿ ಅಗತ್ಯ ಅನುದಾನವನ್ನು ಮೀಸಲಿಟ್ಟು ಕಾರ್ಯರೂಪಕ್ಕೆ ತರಬೇಕು ಎಂದು SDPI ಪಕ್ಷದ ಜಿಲ್ಲಾಧ್ಯಕ್ಷರು ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದೆ. ಮನವಿಗೆ ಪ್ರತಿಕ್ರಿಯಿಸಿದ ಸಚಿವರು ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಾರಿಗೊಳಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ SDPI ರಾಜ್ಯ ಮಾಧ್ಯಮ ಮುಖ್ಯಸ್ಥ ರಿಯಾಝ್ ಕಡಂಬು, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ತಲಪಾಡಿ ಉಪಸ್ಥಿತರಿದ್ದರು

Leave a Comment

Your email address will not be published. Required fields are marked *