ಸಮಗ್ರ ನ್ಯೂಸ್: ರೈತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ. ಯುನೈಟೆಡ್ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200 ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಘೋಷಣೆ ಮಾಡಿದೆ. ಉತ್ತರ ಪ್ರದೇಶ, ಹರ್ಯಾಣ ಮತ್ತು ಪಂಜಾಬ್ ಮತ್ತು ಇತರೆ ಸ್ಥಳಗಳಿಂದ ರೈತರು ಬಂದು ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ.
ಪ್ರತಿಭಟನಾ ನಿರತ ರೈತರು ಬ್ಯಾರಿಕೇಡ್ ತೆಗೆಯಲು ಪ್ರಯತ್ನಿಸಿದ್ದರಿಂದ ಪೊಲೀಸರು ಅಶ್ರುವಾಯು ಶೆಲ್ ಗಳನ್ನು ಸಿಡಿಸಿದ್ದಾರೆ. ಮತ್ತೊಂದೆಡೆ, ರೈತರ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ಪ್ರತಿಭಟನಾಕಾರರು ಮಂಗಳವಾರ ಅಂಬಾಲಾದ ಶಂಭು ಗಡಿಯಲ್ಲಿ ಅಳವಡಿಸಲಾದ ಬ್ಯಾರಿಕೇಡ್ ಅನ್ನು ಒಡೆಯಲು ಪ್ರಯತ್ನಿಸಿದ್ದಾರೆ. ನಂತರ ಹರಿಯಾಣ ಪೊಲೀಸರು ಗುಂಪನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಶಂಭು ಗಡಿಯಲ್ಲಿ ರೈತರು ಟ್ರ್ಯಾಕ್ಟರ್ ಬಳಸಿ ಸಿಮೆಂಟ್ ತಡೆಗೋಡೆಗಳನ್ನು ತೆರವುಗೊಳಿಸಲು ಪ್ರಯತ್ನಿಸಿದಾರೆ.
ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಪರಿಸ್ಥಿತಿಯನ್ನು ನಿಯಂತ್ರಿಸಲು ಅಶ್ರುವಾಯು ಶೆಲ್‌ಗಳನ್ನು ಬಳಸಲಾಗುತ್ತಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ. ಅಶಾಂತಿ ಸೃಷ್ಟಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಈ ರೀತಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ’ ಎಂದು ತಿಳಿಸಿದ್ದಾರೆ.
.
ದೆಹಲಿ ಪೊಲೀಸರ ಆದೇಶದ ಮೇರೆಗೆ, ರಾಷ್ಟ್ರ ರಾಜಧಾನಿಯ ಗಡಿಯನ್ನು ದಾಟದಂತೆ ಟ್ರಾಕ್ಟರ್ ರ್ಯಾಲಿಗಳನ್ನು ನಿಷೇಧಿಸಲಾಗಿದೆ. ಪಂಜಾಬ್, ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ದೆಹಲಿ ಪ್ರವೇಶಿಸಲು ಪ್ರಯತ್ನಿಸುವ ಸಾಧ್ಯತೆ ಇದೆ ಆ ಕಾರಣದಿಂದ ಭದ್ರತೆ ನಿಯೋಜಿಸಲಾಗಿದೆ