Ad Widget .

ಮತ್ತೆ ಸಂಕಷ್ಟಕ್ಕೆ ಸಿಲುಕಿದ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಮತ್ತೆ ಇದೀಗ ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಕೇಸ್‌ನಲ್ಲಿ ಮತ್ತೆ ಡಿಕೆಶಿಗೆ ಕಾನೂನು ಸಂಕಷ್ಟ ಎದುರಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಕ್ರಮ ಆಸ್ತಿ ಗಳಿಕೆ ಕೇಸ್ ಸಂಬಂಧ ಲೋಕಾಯಕ್ತ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಇದ್ದಾಗ ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್‌ ತನಿಖೆ ಹೊಣೆಯನ್ನು ಸಿಬಿಐಗೆ ನೀಡಲಾಗಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿಬಿಐನಿಂದ ಕೇಸ್ ಹಿಂಪಡೆದು, ಲೋಕಾಯುಕ್ತ ಪೊಲೀಸರಿಗೆ ತನಿಖೆ ಹೊಣೆ ನೀಡಲಾಗಿತ್ತು. ಕೆಲ ತಿಂಗಳ ಹಿಂದೆ ಸಿಬಿಐ ಕೇಸ್ ಅನ್ನು ಲೋಕಾಯಕ್ತಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು

Ad Widget . Ad Widget . Ad Widget .

2020ರಲ್ಲಿ ಡಿಕೆಶಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸಿಬಿಐ ಕೇಸ್ ದಾಖಲಿಸಿಕೊಂಡಿತ್ತು. ಬಹುತೇಕ ತನಿಖೆ ಮುಗಿಸಿದ್ದ ಸಿಬಿಐ ಅಧಿಕಾರಿಗಳು, ಚಾರ್ಜ್ ಶೀಟ್ ಸಲ್ಲಿಕೆ ಹಂತಕ್ಕೆ ಬಂದಿದ್ದರು. ಈ ವೇಳೆ ಈ ನಡುವೆ ಕೇಸ್ ಅನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ನೀಡಿತ್ತು. ಈ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸಿಬಿಐ, ಹೈಕೋರ್ಟ್‌ನಲ್ಲಿ ಇದನ್ನು ಪ್ರಶ್ನೆ ಮಾಡಿತ್ತು. ಇದೀಗ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಲೋಕಾಯುಕ್ತ ಪೊಲೀಸರು ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

Leave a Comment

Your email address will not be published. Required fields are marked *