Ad Widget .

ಅಬುಧಾಬಿ ಪ್ರವಾಸದಲ್ಲಿ ಭಾರತದ ಪ್ರಧಾನಿ… ಕನ್ನಡದಲ್ಲಿ ಮಾತನಾಡಿದ ನಮೋ

ಸಮಗ್ರ ನ್ಯೂಸ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಬುಧಾಬಿ ಪ್ರವಾಸದಲ್ಲಿದ್ದಾರೆ. ಇಂದು ನಗರದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಬಳಿಕ ಮೋದಿ ‘ಅಹ್ಲಾನ್‌ ಮೋದಿ’ ಕಾರ್ಯಕ್ರದಲ್ಲಿ ಪಾಲ್ಗೊಂಡು ಆನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಕನ್ನಡ, ತೆಲುಗು, ಮಲಯಾಳಂನಲ್ಲಿ ಭಾಷಣ ಆರಂಭಿಸಿ ಎಲ್ಲರ ಗಮನಸೆಳೆದರು. ನಿಮ್ಮ ಬಗ್ಗೆ ಭಾರತ ಹೆಮ್ಮೆಪಡುತ್ತದೆ ಎಂದು ಕನ್ನಡದಲ್ಲಿ ಹೇಳಿದ ಮೋದಿ, ಅಬುಧಾಬಿಯಲ್ಲಿ ಇಂದು ಹೊಸ ಇತಿಹಾಸ ಸೃಷ್ಟಿಯಾಗಿದೆ. ಇದರ ನೆನಪು ನನ್ನ ಇಡೀ ಜೀವನ ಪೂರ್ತಿ ಇರಲಿದೆ. ನೀವೆಲ್ಲಾ ವಿವಿಧೆಡೆಯಿಂದ ಅಬುಧಾಬಿಗೆ ಬಂದಿದ್ದೀರಿ. ಭಾರತ ಮತ್ತು ಯುಎಇ ಸ್ನೇಹಕ್ಕೆ ಜಿಂದಾಬಾದ್‌ ಎಂದರು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಾನು ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗಲು ಬಂದಿದ್ದೇನೆ. 140 ಕೋಟಿ ಭಾರತೀಯರ ಸಂದೇಶವನ್ನು ನಾನು ತಂದಿದ್ದೇನೆ. ನನ್ನ ಸ್ವಾಗತಿಸಲು ಏರ್‌ಪೋರ್ಟ್‌ಗೆ ಅಧ್ಯಕ್ಷರ ಸೋದರರು ಬಂದಿದ್ದರು. ಕಳೆದ 10 ವರ್ಷದಲ್ಲಿ 7 ಸಲ ನಾನು ಯುಎಇಗೆ ಭೇಟಿ ನೀಡಿದ್ದೇನೆ ಎಂದು ಹೇಳಿದರು.

Ad Widget . Ad Widget . Ad Widget .

ನನಗೆ ಯುಎಇ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ. 2015ರಲ್ಲಿ ದೇವಸ್ಥಾನ ನಿರ್ಮಿಸುವಂತೆ ಯುಎಇಗೆ ಮನವಿ ಮಾಡಿದ್ದೆ. ನಾನು ಹೇಳಿದ ತಕ್ಷಣವೇ ಯುಎಇ ಅಧ್ಯಕ್ಷರು ಒಪ್ಪಿಗೆ ನೀಡಿದ್ದರು. ನೀವು ತೋರಿಸಿದ ಜಾಗದಲ್ಲೇ ಮಂದಿರಕ್ಕೆ ಅವಕಾಶ ನೀಡುತ್ತೇವೆ ಎಂದು ಹೇಳಿದ್ದರು. ಈಗ ಯುಎಇನಲ್ಲಿ ಭವ್ಯ ಮಂದಿರ ಉದ್ಘಾಟಿಸುವ ಸಮಯ ಬಂದಿದೆ. ಯುಎಇನಲ್ಲಿ ಮೊದಲ ಹಿಂದೂ ದೇವಾಲಯ ನಿರ್ಮಾಣಕ್ಕೆ ಅವಕಾಶ ಸಿಕ್ಕಿದ್ದು, ದೇಗುಲ ನಿರ್ಮಾಣಕ್ಕೆ ಅವಕಾಶ ನೀಡಿದ UAE ಅಧ್ಯಕ್ಷರಿಗೆ ಧನ್ಯವಾದ ಎಂದರು.

ಅದರೊಂದಿಗೆ 3ನೇ ಬಾರಿ ಅಧಿಕಾರಕ್ಕೆ ಬಂದ್ರೆ ಆರ್ಥಿಕತೆಯನ್ನು 3ನೇ ಸ್ಥಾನಕ್ಕೆ ತರುವೆ. ಇದು ನನ್ನ ಗ್ಯಾರಂಟಿ ಎಂದು ಹೇಳಿದರು.

Leave a Comment

Your email address will not be published. Required fields are marked *