Ad Widget .

ಶೀಘ್ರದಲ್ಲೇ ಗ್ರಾ. ಪಂ. ಗ್ರಂಥಾಲಯದಲ್ಲಿ ಆನ್ಲೈನ್ ಶಿಕ್ಷಣಕ್ಕೆ ವ್ಯವಸ್ಥೆ | ಗ್ರಾಮೀಣ ಭಾಗದ ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡುವುದಿಲ್ಲ : ಸುರೇಶ್ ಕುಮಾರ್

ಬೆಂಗಳೂರು: ಕಷ್ಟ ಅನುಭವಿಸುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣಕ್ಕಾಗಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಸುಸಜ್ಜಿತ ವ್ಯವಸ್ಥೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Ad Widget . Ad Widget .

ಮೊಬೈಲ್, ವಿದ್ಯುತ್, ನೆಟ್ವರ್ಕ್ ಸಮಸ್ಯೆ ಹೀಗೆ ಹಲವಾರು ಕಾರಣಗಳಿಂದ ಗ್ರಾಮೀಣ ಪ್ರದೇಶದ ಮಕ್ಕಳು ಆನ್ಲೈನ್ ಶಿಕ್ಷಣ ವಂಚಿತರಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣಕ್ಕಾಗಿ ಭಾರೀ ಕಷ್ಟಪಡುವಂತಾಗಿದೆ. ಇದನ್ನು ಗಮನದಲ್ಲಿರಿಸಿಕೊಂಡು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಆನ್ಲೈನ್ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಲು ಚಿಂತಿಸಲಾಗಿದೆ.

Ad Widget . Ad Widget .

ಈ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಯವರಲ್ಲಿ ಸಂವಾದ ನಡೆಸಲಾಗಿದೆ. ಶೀಘ್ರದಲ್ಲಿಯೇ ಈ ವ್ಯವಸ್ಥೆ ಜಾರಿಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಗ್ರಾಮೀಣ ಪ್ರದೇಶದ ಮಕ್ಕಳನ್ನು ಆನ್ಲೈನ್ ಶಿಕ್ಷಣ ವಂಚಿತರನ್ನಾಗಿ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹೇಳಿದ್ದಾರೆ.

Leave a Comment

Your email address will not be published. Required fields are marked *