ಸಮಗ್ರ ಉದ್ಯೋಗ: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 836 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 21, 2024 ಅಪ್ಲೈ ಮಾಡಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ವಿದ್ಯಾರ್ಹತೆ:
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ
ಸೇವಾ ದಾಖಲೆಗಳ ಪರಿಶೀಲನೆ
ಲಿಖಿತ ಪರೀಕ್ಷೆ
ದೈಹಿಕ ಮಾನದಂಡಗಳ ಪರೀಕ್ಷೆ
ದೈಹಿಕ ದಕ್ಷತೆಯ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ & ಆಫ್ಲೈನ್ ಮೂಲಕ ಅಪ್ಲೈ ಮಾಡಬಹುದು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://www.cisf.gov.in/cisfeng/ apply here