ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿಗಳನ್ನು ನೀಡಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 01 ರಿಂದ 22ರ ವರೆಗೆ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು. ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.
ಪಿಯುಸಿಗೆ 1124 ಪರೀಕ್ಷಾ ಕೇಂದ್ರಗಳು ಇರಲಿದೆ.
SSLC ಗೆ 2747 ಪರೀಕ್ಷಾ ಕೇಂದ್ರಗಳು ಇರಲಿದೆ. ಎಂದು ತಿಳಿಸಿದ್ದಾರೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರ ವರೆಗೆ ಪರೀಕ್ಷೆ ನಡೆಯಲಿದೆ.
ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಹಾಗೂ ಎಸ್ ಎಸ್ಎಲ್ಸಿ ಪರೀಕ್ಷೆ-2 ನ್ನು ಎಪ್ರಿಲ್ ಕೊನೆಯ ವಾರದಲ್ಲಿ ನಡೆಸುತ್ತೇವೆ ಎಂದರು.
ಇನ್ನೂ ಹಿಜಾಬ್ ಬಗ್ಗೆ ಮಾತನಾಡಿದ ಅವರು ಪರೀಕ್ಷೆಗೆ ಹಿಜಾಬ್ ಅವಕಾಶ ವಿಚಾರವಾಗಿ ನ್ಯಾಯಾಲಯದ ನಿರ್ದೇಶನದಂತೆ ಸಮವಸ್ತ್ರ ನಿಯಮ ಪಾಲನೆ ಮಾಡಲಾಗುತ್ತದೆ. ಅಡ್ವಕೇಟ್ ಜನರಲ್ ಅವರ ಸಲಹೆ ಪಡೆದು ಹಿಜಾಬ್ ವಿಚಾರ ನಿರ್ಧರಿಸಲಾಗುತ್ತದೆ ಎಂದರು