ಸಮಗ್ರ ನ್ಯೂಸ್: ಚುನಾವಣಾ ಹಿನ್ನಲೆಯಲ್ಲಿ ದೆಹಲಿಯಲ್ಲಿ ಸಭೆ ನಡೆಯಲಿರುವ ಕಾರಣ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ ನೀಡಲಾಗಿದೆ. ಮಾರ್ಚ್ 5 ರಿಂದ ಮತ್ತೆ ಯಾತ್ರೆ ಆರಂಭವಾಗಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದ ಸಭೆಗಳಲ್ಲಿ, ರಾಹುಲ್ ಗಾಂಧಿ ಸಭೆಯಲ್ಲಿ ಭಾಗಿಯಾಗಬೇಕಿದೆ. ಈ ಕಾರಣದಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಾತ್ಕಾಲಿಕ ವಿರಾಮ ನೀಡಲಾಗಿದೆ.