ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ/ ಸಜ್ಜುಗೊಳ್ಳುತ್ತಿದೆ ಶಿವಮೊಗ್ಗದ ಫ್ರೀಡಂ ಪಾರ್ಕ್

ಸಮಗ್ರ ನ್ಯೂಸ್: ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಫೆಬ್ರವರಿ 24ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯಿಂದ ಸರ್ಕಾರದ ಗ್ಯಾರಂಟಿ ಸೌಲಭ್ಯ ಪಡೆದ ಎಲ್ಲಾ ಫಲಾನುಭವಿಗಳು ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

Ad Widget ... ..

ಸುಮಾರು 50 ಸಾವಿರಕ್ಕೂ ಹೆಚ್ಚಿನ ಜನ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸುವ ನಿರೀಕ್ಷೆಯಿದ್ದು, ಅವರ ಅನುಕೂಲಕ್ಕಾಗಿ ಎಲ್ಲ ರೀತಿಯ ಮೂಲಭೂತ ಸೌಕರ್ಯ, ಶೌಚಾಲಯ, ಕುಡಿಯುವ ನೀರು, ಮಧ್ಯಾಹ್ನದ ಉಪಹಾರ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಆಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ತಿಳಿಸಿದರು.

Ad Widget

ಫಲಾನುಭವಿಗಳನ್ನು ಉದ್ದೇಶಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಲಿದ್ದು, ಸಚಿವ ಸಂಪುಟದ ಕೆಲ ಸಚಿವರು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರು ಆಗಮಿಸಲಿದ್ದಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ ಪಂ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೆÇಲೀಸ್ ಅಧಿಕಾರಿ ಜಿ.ಕೆ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *