ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿವೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದ ಕಾಂಗ್ರೆಸ್ಗೆ ಇದೀಗ ಮೊದಲು ರಾಜ್ಯಸಭೆಯಲ್ಲಿ ಗೆಲ್ಲುವ ಟಾಸ್ಕ್ ಇದೆ. ನಾಲ್ಕು ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿಯಾಗಿ 5ನೇ ಅಭ್ಯರ್ಥಿ ಕಣದಲ್ಲಿರುವುದರಿಂದ ಆಡಳಿತರೂಢ ಕಾಂಗ್ರೆಸ್ಗೆ ಭಯ ಶುರುವಾಗಿದೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ವೊಂದರಲ್ಲಿ ಕಾಂಗ್ರೆಸ್ನ ಎರಡು ಪ್ರತ್ಯೇಕ ಸಭೆಗಳು ನಡೆದಿದ್ದು, ಇದು ಕುತೂಹಲಕ್ಕೆ ಕಾರಣವಾಗಿದೆ.
ಒಂದೇ ಹೋಟೆಲ್ನಲ್ಲಿ ಒಂದು ಕಡೆ ಹಳೇ ಮೈಸೂರು ಭಾಗದ ಕಾಂಗ್ರೆಸ್ನ ಒಕ್ಕಲಿಗ ನಾಯಕರ ಸಭೆ ನಡೆದಿದ್ದರೆ, ಮತ್ತೊಂದೆಡೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದಬಂದಿದೆ.