Ad Widget .

ಮಣಿಪುರದಲ್ಲಿ ಭೀಕರ ಜನಾಂಗೀಯ ಸಂಘರ್ಷಕ್ಕೆ ಕಾರಣವಾದ ಆದೇಶ ರದ್ದುಹೊಳಿಸಿದ ಮಣಿಪುರ ಹೈಕೋರ್ಟ್

ಸಮಗ್ರ ನ್ಯೂಸ್: ಭೀಕರ ಜನಾಂಗೀಯ ಸಂಘರ್ಷಕ್ಕೆ ನಾಂದಿ ಹಾಡಿ ಮಣಿಪುರದಲ್ಲಿ ಸುಮಾರು 200 ಜನರ ಹತ್ಯೆಗೆ ಕಾರಣವಾದ ವಿವಾದಿತ ಮೈತೇಯಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‍ಟಿ) ಪಟ್ಟಿಗೆ ಸೇರಿಸುವಂತೆ ನೀಡಿದ ಆದೇಶವನ್ನು ಮಣಿಪುರ ಹೈಕೋರ್ಟ್ ಈಗ ರದ್ದುಗೊಳಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೈತೇಯಿ ಸಮುದಾಯವನ್ನು ಎಸ್‍ಟಿ ಪಟ್ಟಿಗೆ ಸೇರಿಸುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಹಂಗಾಮಿ ಮುಖ್ಯ ನ್ಯಾಯಾಧೀಶ ನ್ಯಾ. ಎಂ.ವಿ. ಮುರಳೀಧರನ್ 2023ರ ಮಾ.27ರಂದು ಆದೇಶ ಹೊರಡಿಸಿ, ಮಣಿಪುರ ಸರ್ಕಾರಕ್ಕೆ ಸೂಚನೆ ನೀಡಿದ್ದರು. ಇದನ್ನು ವಿರೋಧಿಸಿದ್ದ ಕುಕಿ ಸಮುದಾಯದ ಜನರು, ಈ ಆದೇಶದ ವಿರುದ್ಧ ದಂಗೆ ಎದ್ದಿದ್ದರು. ಆ ಬಳಿಕ ತಿಂಗಳಾನುಗಟ್ಟಲೆ ನಡೆದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ರಾಜ್ಯದಲ್ಲಿ ಬಲಿಯಾಗಿದ್ದಾರೆ.

Ad Widget . Ad Widget . Ad Widget .

ಈ ಆದೇಶ ರದ್ದತಿ ಕೋರಿ ಮಣಿಪುರ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಕೆ ಆಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ. ಗೋಲ್ಮಿ ಗೈಫುಲ್‍ಶಿಲ್ಲು ಅವರು, ಎಸ್ಸಿ-ಎಸ್ಟಿ ಪಟ್ಟಿಗೆ ಜಾತಿಗಳನ್ನು ಸೇರಿಸುವಂತೆ ಸೂಚನೆ ನೀಡುವ ಅಧಿಕಾರ ಕೋರ್ಟ್‍ಗಳಿಗೆ ಇಲ್ಲ ಎಂದು ಸುಪ್ರೀಂ ಕೋರ್ಟು, ಈ ಹಿಂದೆ ಮಹಾರಾಷ್ಟ್ರದ ಪ್ರಕರಣವೊಂದರಲ್ಲಿ ತೀರ್ಪು ನೀಡಿತ್ತು.

ಈ ಹಿನ್ನೆಲೆಯಲ್ಲಿ ಮೈತೇಯಿಗಳನ್ನು ಎಸ್‍ಟಿ ಪಟ್ಟಿಗೆ ಸೇರಿಸುವ ಆದೇಶವನ್ನು ರದ್ದು ಮಾಡುತ್ತೇವೆ ಎಂದು ಹೇಳಿದ್ದಾರೆ. ಇದರೊಂದಿಗೆ 1 ವರ್ಷದಿಂದ ನಡೆದಿರುವ ಜನಾಂಗೀಯ ಸಂಘರ್ಷಕ್ಕೆ ಮಹತ್ವದ ತಿರುವು ಸಿಕ್ಕಂತಾಗಿದೆ.

Leave a Comment

Your email address will not be published. Required fields are marked *