ಸಮಗ್ರ ಉದ್ಯೋಗ: Union Bank of India ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 606 ಸ್ಪೆಷಲಿಸ್ಟ್ ಆಫೀಸರ್ (ಮ್ಯಾನೇಜರ್) ಹುದ್ದೆಗಳು ಖಾಲಿ ಇದ್ದು, ಅಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಫೆಬ್ರವರಿ 23, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ವಿದ್ಯಾರ್ಹತೆ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಬಿಇ/ಬಿ.ಟೆಕ್, ಎಂಸಿಎ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ, CA, ICWA, ಪಿಜಿಡಿಎಂ, ಕಾನೂನಿನಲ್ಲಿ ಪದವಿ, LLB ಪೂರ್ಣಗೊಳಿಸಿರಬೇಕು.
ವಯೋಮಿತಿ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 20ರಿಂದ ಗರಿಷ್ಠ 45 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು
ವೇತನ:
ಮಾಸಿಕ ₹ 63,840-89,890
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು: ರೂ.175/-
ಸಾಮಾನ್ಯ/OBC/EWS ಅಭ್ಯರ್ಥಿಗಳು: ರೂ.850/-
ಪಾವತಿ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ
ಗುಂಪು ಚರ್ಚೆ
ವೈಯಕ್ತಿಕ ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://ibpsonline.ibps.in/ubisojan24/ apply here. ಆಸಕ್ತರು ಈಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.