ಸಮಗ್ರ ನ್ಯೂಸ್: ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ, 1935 ಅನ್ನು ಅಸ್ಸಾಂ ಕ್ಯಾಬಿನೆಟ್ ರದ್ದುಗೊಳಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಅನುಷ್ಠಾನದಲ್ಲಿ ಪ್ರಮುಖ ಹೆಜ್ಜೆಯನ್ನು ಇಟ್ಟಿದೆ, ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳಿಗೆ ಸಂಬಂಧಿಸಿದ ಎಲ್ಲಾ ಅಂಶಗಳು ಈಗ ವಿಶೇಷ ವಿವಾಹ ಕಾನೂನಿಗೆ ಒಳಪಟ್ಟಿವೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಅಸ್ಸಾಂ ಸಚಿವ ಜಯಂತ ಮಲ್ಲಾ ಬರುವಾ, ಅಸ್ಸಾಂ ಕ್ಯಾಬಿನೆಟ್ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಅಸ್ಸಾಂ ವಿಧಾನಸಭೆ ಅಧಿವೇಶನ ಫೆ.28ರವರೆಗೆ ನಡೆಯಲಿದ್ದು, ಈ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.