ಲೋಕಸಭಾ ಚುನಾವಣೆ/ ದಿನಾಂಕ ಘೋಷಣೆ ಯಾವಾಗ?

ಸಮಗ್ರ ನ್ಯೂಸ್: ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಲೋಕಸಭೆಯ ಸಾರ್ವತ್ರಿಕ ಚುನಾವಣೆ ನಡೆಯುವ ನಿರೀಕ್ಷೆ ಇದ್ದು, ಮಾ.13ರ ನಂತರ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣೆ ಸಿದ್ಧತೆ ಪರಿಶೀಲನೆ ಸಲುವಾಗಿ ಆಯೋಗ ಈಗಾಗಲೇ ಹಲವಾರು ರಾಜ್ಯಗಳಿಗೆ ಭೇಟಿ ನೀಡುತ್ತಿದ್ದು, ಆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ದಿನಾಂಕ ಘೋಷಿಸಲಾಗುತ್ತದೆ.

Ad Widget ... ..

ಪ್ರಸ್ತುತ ತಮಿಳುನಾಡಿನಲ್ಲಿ ಆಯೋಗ ಪರಿಶೀಲನೆ ಸಭೆ ನಡೆಸುತ್ತಿದ್ದು, ಬಳಿಕ ಉತ್ತರಪ್ರದೇಶ ಹಾಗೂ ಜಮ್ಮು-ಕಾಶ್ಮೀರಕ್ಕೆ ತೆರಳಲಿದೆ. ಈ ಭೇಟಿಗಳು ಮುಗಿದ ಬಳಿಕ ದಿನಾಂಕ ಪ್ರಕಟ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿಯವರು ಮಾ.3ರಂದು ಮಂತ್ರಿ ಪರಿಷತ್ ಸಭೆ ಕರೆದಿದ್ದು, ಅದರಲ್ಲಿ ಚುನಾವಣೆಯ ಬಗ್ಗೆ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ.

Ad Widget

2014ರಲ್ಲಿ ಮಾ.5ಕ್ಕೆ ಚುನಾವಣೆ ಘೋಷಣೆಯಾದರೆ, 2019ರಲ್ಲಿ ಮಾ.10ಕ್ಕೆ ಚುನಾವಣೆ ಘೋಷಣೆಯಾಗಿತ್ತು.

Leave a Comment

Your email address will not be published. Required fields are marked *