ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಡ್ರಮ್ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿಯಾದ ಘಟನೆ ನಡೆದಿದೆ.
ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಿಸರ್ಗ ಲೇಔಟ್ನಲ್ಲಿ ಈ ಕೃತ್ಯ ನಡೆದಿದೆ. ಕಳೆದ ಎರಡು ಮೂರು ದಿನಗಳ ಹಿಂದೆಯೇ ವೃದ್ಧೆಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ದುರ್ವಾಸನೆ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಹಾಗೂ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವಿಚಾವಾಗಿ ಪರಿಶೀಲನೆಯನ್ನು ನಡೆಸಿದ್ದಾರೆ.