ಬೆಂಗಳೂರು: ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿದ್ದು ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 10 ಜಿಲ್ಲೆಗಳನ್ನು ರೇಡ್’ಝೋನ್ ನಲ್ಲಿರಿಸಿ ಕೇಂದ್ರ ಸರ್ಕಾರ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ದೇಶದಲ್ಲಿ ಕೋವಿಡ್ ಎರಡನೆಯ ಅಲೆ ಕೊಂಚ ಕಡಿಮೆಯಾಗುತ್ತಿರುವ ಬೆನ್ನಲ್ಲೇ ಮೂರನೆ ಅಲೆಯ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವ ಸಲುವಾಗಿ ದೇಶದ ಜಿಲ್ಲೆಗಳನ್ನು ಕೇಂದ್ರ ಸರ್ಕಾರ ಕೆಲವು ಜೋನ್ ಗಳಾಗಿ ವಿಂಗಡಿಸಿದೆ. ಇದರಲ್ಲಿ ಎರಡನೆಯ ಅಲೆಯಲ್ಲಿ ತೀವ್ರವಾಗಿ ತತ್ತರಿಸಿರುವ ಜಿಲ್ಲೆಗಳನ್ನು ರೆಡ್’ಜೋನ್’ನಲ್ಲಿ ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 10 ಜಿಲ್ಲೆಗಳನ್ನು ರೆಡ್’ಜೋನ್’ನಲ್ಲಿ ಗುರುತಿಸಲಾಗಿದೆ. ಬೆಂಗಳೂರು, ಮೈಸೂರು, ತುಮಕೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತೀವ್ರ ನಿಗಾ ವಹಿಸುವಂತೆ ಕೇಂದ್ರ ಸರ್ಕಾರ ಹೇಳಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಲ್ಡ್ ಪಾಸಿಟಿವಿಟಿ ದರ ತೀವ್ರ ಇಳಿಕೆ ಕಂಡಿದ್ದು ಶೇಕಡಾ 2.19 ಕ್ಕೆ ತಗ್ಗಿದೆ. ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಿದೆ. ಆದರೆ ಮರಣ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡು ಬಂದಿಲ್ಲ.