ಸಮಗ್ರ ಉದ್ಯೋಗ: ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 500 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ವಿದ್ಯಾರ್ಹತೆ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 31, 2024ಕ್ಕೆ ಕನಿಷ್ಠ 20 ವರ್ಷಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಾರ್ಷಿಕ ಸಂಬಳದ ಪ್ಯಾಕೇಜ್ 6,14,000- 6,50,000 ಕೊಡಲಾಗುತ್ತದೆ.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWBD ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳು: ರೂ.200/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/-
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಟೆಸ್ಟ್
ದಾಖಲಾತಿ ಪರಿಶೀಲನೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://ibpsonline.ibps.in/idbijan24/ apply here