ಸಮಗ್ರ ನ್ಯೂಸ್: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ಗೆ ಕನ್ಫರ್ಮ್ ಆಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯ ಸ್ಥಳೀಯ ನಾಯಕರ ಸಭೆ ನಡೆಸಿ ಚುನಾವಣೆ ಸಿದ್ಧತೆ ಮಾಡುತ್ತಿದ್ದೇವೆ. ಮಂಡ್ಯ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಭ್ಯರ್ಥಿ ಯಾರೆಂದು ಇನ್ನೂ ತೀರ್ಮಾನವಾಗಿಲ್ಲ ಎಂದು ಹೇಳಿದ್ದಾರೆ.
ಟಿಕೆಟ್ ಗಾಗಿ ಸಂಸದೆ ಸುಮಲತಾ ಸಭೆ ವಿಚಾರವಾಗಿ ಮಾತನಾಡಿದ ಅವರು, ಸುಮಲತಾರವರು ಅಧಿಕೃತ ಬಿಜೆಪಿ ಮೆಂಬರ್ ಅಲ್ಲ. ಆದರೂ ಅವರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಮಂಡ್ಯ ಕೇಳಿದರೆ ಬೆಂಗಳೂರು ನಾರ್ತ್ ಕೊಡಬಹುದು ಎಂಬ ಲೆಕ್ಕಾಚಾರ ಇರಬಹುದು. ನನಗೆ ಕೆಲವರು ಈ ಬಗ್ಗೆ ಹೇಳುತ್ತಿದ್ದಾರೆ ಎಂದರು.