Ad Widget .

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ/ ಸಮಿತಿ ರಚಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ನೊಟೀಸ್

ಸಮಗ್ರ ನ್ಯೂಸ್: ಶಿವಮೂರ್ತಿ ಮುರುಘಾ ಶರಣರ ಮುರುಘಾ ಮಠ ಮತ್ತು SJM ವಿದ್ಯಾಪೀಠ ಆಡಳಿತಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಒಳಗಾಗಿ ಹೈಕೋರ್ಟ್ ಆದೇಶದಂತೆ ಸಮಿತಿ ರಚಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ನೊಟೀಸ್ ನೀಡಿದೆ. ಎರಡು ವಾರಗಳಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡುವಂತೆಯೂ ಸೂಚಿಸಿದೆ. ಇದರ ಜೊತೆಗೆ ಮಠದ ಆಡಳಿತವನ್ನು ಸರಕಾರವೇ ನೋಡಿಕೊಳ್ಳುವಂತೆ ಕೋರ್ಟ್ ಸೂಚಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನ್ಯಾ.ವಿಕ್ರಮನಾಥ್ ನೇತೃತ್ವದ ಪೀಠ ಈ ಸಂಬಂಧ ಮೇಲ್ವಿಚಾರಣಾ ಸಮಿತಿಯಲ್ಲಿ ಆರೋಪಿಗಳು ಇರದಂತೆ ನೋಡಿಕೊಳ್ಳಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ಹೊರಡಿಸಿದೆ.
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಫೆÇೀಕೋ ಪ್ರಕರಣ ಇದ್ದು ಸದ್ಯ ಶಿವಮೂರ್ತಿ ಮುರುಘಾ ಶರಣರು ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಮುರುಘಾಮಠ ಮತ್ತು ವಿದ್ಯಾಪೀಠದ ಅಧ್ಯಕ್ಷರಾಗಿ ಆಡಳಿತ ನಡೆಸುತ್ತಿದ್ದಾರೆ. ಜೈಲಿಂದ ಬಿಡುಗಡೆಯಾದ ಬಳಿಕ ಮುರುಘಾಶ್ರೀ ಆಡಳಿತ ನಡೆಸುತ್ತಿವುದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

Ad Widget . Ad Widget . Ad Widget .

Leave a Comment

Your email address will not be published. Required fields are marked *