ಸಮಗ್ರ ಉದ್ಯೋಗ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್ & ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಕಾಂ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 19,917
ಉದ್ಯೋಗದ ಸ್ಥಳ:
ಧಾರವಾಡ
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಅನುಭವ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಯೋಜನಾ ನಿರ್ದೇಶಕರ ಕಚೇರಿ
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ
ಕಾರ್ಮಿಕ ಭವನ, ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ
ಧಾರವಾಡ ವಿಭಾಗ
ಹುಬ್ಬಳ್ಳಿ 1ನೇ ಮಹಡಿ
ಅಕ್ಷಯ ಪಾರ್ಕ್
ಪ್ರಿಯದರ್ಶಿನಿ ಕಾಲೋನಿ
ಮಹೇಶ ಪಿ.ಯು. ಕಾಲೇಜು ರಸ್ತೆ
ಹುಬ್ಬಳ್ಳಿ