ಸಮಗ್ರ ಉದ್ಯೋಗ: ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 202 ಹೋಂ ಗಾರ್ಡ್ (ಗೃಹರಕ್ಷಕ) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಕನ್ನಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ನೇಮಕಾತಿ ಅಧಿಸೂಚನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳ ನೇಮಕಾತಿ ಅಧಿಸೂಚನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ಉತ್ತರ ಕನ್ನಡ
ಆಯ್ಕೆ ಪ್ರಕ್ರಿಯೆ:
ಮೆಡಿಕಲ್ ಟೆಸ್ಟ್
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜಿಲ್ಲಾಧಿಕಾರಿಗಳ ಕಛೇರಿ
ಗೃಹರಕ್ಷಕ ದಳ
ಸರ್ವೋದಯ ನಗರ
ದಿವೇಕರ್ ವಾಣಿಜ್ಯ ಕಾಲೇಜು ಎದುರು
ಕೋಡಿಬಾಗ
ಕಾರವಾರ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/02/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 28, 2024(ನಾಳೆ)
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-200137/226361 ಗೆ ಕರೆ ಮಾಡಿ