ಸಮಗ್ರ ನ್ಯೂಸ್: ಮೈಸೂರು ಕೊಡಗು ರೈಲು ಮಾರ್ಗವನ್ನು ಶೀಘ್ರದಲ್ಲಿ ನಿರ್ಮಾಣ ಮಾಡಲಿದ್ದೇವೆ. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಆದಷ್ಟು ಬೇಗ ಭೂಸ್ವಾಧೀನ ಮಾಡಿ ಉಚಿತವಾಗಿ ಒದಗಿಸಿಕೊಡಬೇಕು. ಉಸ್ವಾಧೀನ ಬೇಗ ಆದರೆ ಮೈಸೂರು ಕೊಡಗು ರೈಲು ಯೋಜನೆ ತ್ವರಿತವಾಗಿ ಸಾಕಾರಗೊಳ್ಳಲಿದೆ ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.
ಮೈಸೂರು ಕೊಡಗು ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಿಕೊಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. ಮೈಸೂರು ವಿಭಾಗದ ರೈಲ್ವೆ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ಶಂಕುಸ್ಥಾಪನೆ ನೆರವೇರಿಸಿದ ನಂತರ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದರೆ ಮೈಸೂರು – ಕೊಡಗು ನಡುವಣ ರೈಲು ಮಾರ್ಗ ಶೀಘ್ರ ಸಾಕಾರಗೊಳ್ಳಲಿದೆ. ನಾವು ವಿವರವಾದ ಯೋಜನಾ ವರದಿಯೊಂದಿಗೆ ಸಿದ್ಧರಿದ್ದೇವೆ ಮತ್ತು ಸಮೀಕ್ಷೆಗಳು ಪೂರ್ಣಗೊಂಡಿವೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಭೂಮಿ ಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ಉಚಿತವಾಗಿ ಹಸ್ತಾಂತರಿಸಬೇಕು. ಮೈಸೂರಿನವರೇ ಆದ ಸಿದ್ದರಾಮಯ್ಯರವರು ತವರು ಜಿಲ್ಲೆಗೆ ಇದನ್ನು ಮಾಡುತ್ತಾರೆ ಎಂಬ ಬಗ್ಗೆ ನನಗೆ ಖಾತ್ರಿಯಿದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.