ಟ್ರಕ್ ಹಾಗೂ ಟಾಟಾ ಎಸ್ ನಡುವೆ ಡಿಕ್ಕಿ|ನಾಲ್ವರು ಸಾವು

ಸಮಗ್ರ ನ್ಯೂಸ್:ಇಂದು ಮುಂಜಾನೆ ಹೊತ್ತಲ್ಲಿ ಬೀದರ್​ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಳಗ್ಗೆ ಸುಮಾರು 4.30 ಹೊತ್ತಿಗೆ ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

Ad Widget ... ..

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಈ ಘಟನೆ ನಡೆದಿದ್ದು ಐದು ಜನರಿಗೆ ಗಾಯಗಳಾಗಿದ್ದು ಬೀದರ್ ನ ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.

Ad Widget

ಟಾಟಾ ಎಸ್ ವಾಹನದಲ್ಲಿ 14 ಜನ ಉಗ್ಗಿರ್ ನಿಂದಾ ಹೈದ್ರಾಬಾದ್ ಹೋಗುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಟ್ರಕ್-ಟಾಟಾ ಎಸಿ ನಡುವೆ ಡಿಕ್ಕಿಯಾಗಿದ್ದು ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಸೇರಿ ನಾಲ್ವರು ಮೃತಪಟ್ಟಿದ್ದಾರೆ.

Leave a Comment

Your email address will not be published. Required fields are marked *